ಸೋಂಕಿತರ ಮನೆಗೆ ಬೋರ್ಡು ನವಯುಗದ ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆಗೆ ಕಾರಣ: ಎಚ್ಡಿಕೆ ಕಿಡಿ
ಕೊರೊನಾ ಸೋಂಕಿತರ ಮನೆಗಳ ಎದುರು ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ, ಇದು ಸಾಮಾಜಿಕ ಸಾಮರಸ್ಯವನ್ನು ಕೆಡಿಸುತ್ತಿರಯವ ಕ್ರಮವನ್ನು ಮಾಜಿ ಸಿಎಂ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರವು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಇಂತಹ ತಾರತಮ್ಯದ ಕ್ರಮವನ್ನು ಕೈಬಿಡುಂತೆ ಆಗ್ರಹಿಸಿದ್ದಾರೆ.
ಸೋಂಕಿತರಿದ್ದಾರೆ ಎಂದು ಸಾರುವ ಬೋರ್ಡುಗಳನ್ನು ಬಾಧಿತರ ಮನೆಗೆ ಹಾಖುವ ಕ್ರಮವನ್ ಬಿಬಿಎಂಪಿ ನಿಲ್ಲಿಸಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ. ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠಕ್ಕೆ ಸರ್ಕಾರ ಕೂಡಲೇ ಅಂತ್ಯಹಾಡಬೇಕು ಎಂದಿದ್ದಾರೆ.
#COVID19 ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ.ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರವೂ ವ್ಯಕ್ತಿ,ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು.
1/4— H D Kumaraswamy (@hd_kumaraswamy) July 19, 2020
ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ ಬದಲು ಆರೋಗ್ಯ ಕಾರ್ಯಕರ್ತರನ್ನು ಅವರ ಮನೆಗೆ ಕಳುಹಿಸಿ ಧೈರ್ಯ, ಜಾಗೃತಿ, ಅರಿವು ಮೂಡಿಸಬೇಕು. ಮನೆಯಿಂದ ಹೊರಬಾರದಂತೆ ಅವರ ಜವಾಬ್ದಾರಿ ತಿಳಿಸಿಕೊಡಬೇಕು. ಅದು ಬಿಟ್ಟು ಇಂಥ ಅಪಮಾನಿಸುವ ಪರಿಪಾಠ ಬೇಡ. ಈ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಗಮನ ಹರಿಸಲಿ ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ ಚಿಕಿತ್ಸೆ ನಿರಾಕರಿಸುವುದು ಯಾವುದೇ ಆಸ್ಪತ್ರೆಯ ತಪ್ಪು. ಆದರೆ ಅದೇ ಕಾರಣಕ್ಕೆ ಸರ್ಕಾರ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಬೆದರಿಕೆ ಹಾಕುವುದು ಸರಿಯಲ್ಲ. ಆರೋಗ್ಯದ ಈ ತುರ್ತುಪರಿಸ್ಥಿತಿಯಲ್ಲಿ ಅದರಿಂದ ಲಾಭವೂ ಇಲ್ಲ. ಅಷ್ಟಕ್ಕೂ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಅಧಿಕಾರ ಸರ್ಕಾರಕ್ಕಲ್ಲ ನೆನಪಿರಲಿ ಎಂದು ಎಚ್ಚರಿಸಿದ್ದಾರೆ.
ಚಿಕಿತ್ಸೆ ನಿರಾಕರಿಸುವುದು ಯಾವುದೇ ಆಸ್ಪತ್ರೆಯ ತಪ್ಪು. ಆದರೆ ಅದೇ ಕಾರಣಕ್ಕೆ ಸರ್ಕಾರ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಬೆದರಿಕೆ ಹಾಕುವುದು ಸರಿಯಲ್ಲ. ಆರೋಗ್ಯದ ಈ ತುರ್ತುಪರಿಸ್ಥಿತಿಯಲ್ಲಿ ಅದರಿಂದ ಲಾಭವೂ ಇಲ್ಲ. ಅಷ್ಟಕ್ಕೂ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಅಧಿಕಾರ ಇರುವುದು MCIಗೆ. ಸರ್ಕಾರಕ್ಕಲ್ಲ ನೆನಪಿರಲಿ. 3/4
— H D Kumaraswamy (@hd_kumaraswamy) July 19, 2020
ಈ ಪರಿಸ್ಥಿಯಲ್ಲಿ ಮೆಡಿಕಲ್ ಕಾಲೇಜುಗಳ ಮೇಲೆ ರೋಷಾವೇಶ ತೋರುವುದನ್ನು ಬಿಟ್ಟು ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡು ಅವರ ಸೇವೆ ಪಡೆಯುವತ್ತ ಸರ್ಕಾರ ಗಮನಹರಿಸಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಖಾಸಗಿ ವೈದ್ಯ ಸಂಸ್ಥೆಗಳ ಅಗತ್ಯಗಳನ್ನು ಪೂರೈಸುವತ್ತ ಸರಕಾರ ಗಂಭೀರವಾಗಿ ಗಮನ ಹರಿಸಬೇಕಿದೆ ಎಂದು ಕುಮಾರಸ್ವಾಮಿ ಕಿವಿಡ ಮಾತು ಹೇಳಿದ್ದಾರೆ. ಹೀಗೆ ಮಾಡುವ ಮೂಲಕ ಕೊರೊನಾ ವೈರಸ್ ವಿರುದ್ಧ ಸಾಂಘಿಕ ಹೋರಾಟ ನಡೆಸಲು ವಾತಾವರಣ ನಿರ್ಮಾಣ ಮಾಡಲಿ ಎಂದು ಎಚ್ಡಿಕೆ ಅಭಿಪ್ರಾಯ ಪಟ್ಟಿದ್ದಾರೆ.

