ಹಣಕ್ಕಿಂತ ಜನರ ಆರೋಗ್ಯ ಮುಖ್ಯ; ರಾಜ್ಯದಲ್ಲಿ ಲಾಕ್‌ಡೌನ್‌ ಮಾಡಿ: ಕುಮಾರಸ್ವಾಮಿ ಆಗ್ರಹ!

ಕೊರೊನಾ ಸೋಂಕು ದಿನಕಳೆದಂತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ರಾಜ್ಯದಲ್ಲಿ ಜನರ ಆರೋಗ್ಯ ಮುಖ್ಯವೇ ಹೊರತು, ಹಣ ಆರ್ಥಿಕತೆಯಲ್ಲ. ಕೂಡಲೇ ಕನಿಷ್ಟ 20 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್‌ ಮಾಡಿ ಎಂದು ಆಗ್ರಹಿಸಿದ್ದಾರೆ.

ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್​​ಡೌನ್, ಲಾಕ್​​ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್​​ಡೌನ್ ಮಾಡಿಬೇಕು. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ ಎಂದು ಮತ್ತೊಂದು ಟ್ವೀಟ್​​ನಲ್ಲಿ ಎಚ್​​ಡಿಕೆ ಆಗ್ರಹಿಸಿದ್ದಾರೆ.

ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು ಎನ್ನುವ ಮೂಲಕ ಕೇಂದ್ರ ಸರ್ಕಾರವನ್ನು ಎಚ್​​ಡಿಕೆ ಕುಟುಕಿದ್ದಾರೆ.

ಇತ್ತೀಚೆಗೆ ಕರ್ನಾಟಕದಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಬೆಂಗಳೂರಿನಲ್ಲಂತೂ ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್​​ ಕೇಸುಗಳು ವರದಿಯಾಗಿವೆ. ಪ್ರತೀದಿನ ನೂರಾರು ಕೇಸುಗಳು ದಾಖಲಾಗುತ್ತಿವೆ. ಹೀಗಿರುವಾಗ ಸಿಎಂ ಯಡಿಯೂರಪ್ಪ ಸರ್ಕಾರ ಕೋವಿಡ್​​​-19 ಸೋಂಕು ಹೆಚ್ಚಿರುವ ಪ್ರದೇಶಗಳನ್ನು ಮಾತ್ರ ಸೀಲ್​ಡೌನ್​​ ಮಾಡಲಾಗುವುದು ಎಂದಿದ್ದಾರೆ. ಹೀಗಾಗಿ ಎಚ್​​ಡಿಕೆ ಹಣಕ್ಕಿಂತಲೂ ಜನರ ಪ್ರಾಣ ಮುಖ್ಯ ಸಂಪೂರ್ಣ ಬೆಂಗಳೂರು ಲಾಕ್​ಡೌನ್​​ ಮಾಡಿ ಎಂದು ಆಗ್ರಹಿಸಿದ್ದಾರೆ.​

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights