Corona : ಸಚಿವರು ಮತ್ತು ಶಾಸಕರ ವೇತನಕ್ಕೆ ಕತ್ತರಿ, ಶೇ.30 ರಷ್ಟು ಕಡಿತಕ್ಕೆ ಸಂಪುಟ ಒಪ್ಪಿಗೆ…

ದೇಶದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಮಹಾಮಾರಿ ಕೊರೋನಾ  ಜನಪ್ರತಿನಿಧಿಗಳು, ಜನಸಾಮಾನ್ಯರು, ಬಡವರು ಯಾರನ್ನೂ ಬಿಡದೇ ಕಾಡುತ್ತಿದೆ. ಈ ಮಧ್ಯೆ ರಾಜ್ಯದಲ್ಲೂ ಮಾರಣಾಂತಿಕ ಕೊರೋನಾ ಅಬ್ಬರಿಸುತ್ತಿದ್ದು ಅದು ದೇಶದ ಆರ್ಥಿಕ ಸ್ಥಿತಿಯನ್ನು ಹದಗೆಡಿಸಿದೆ.. ಇದಕ್ಕೆ ರಾಜ್ಯ ಕೂಡಾ ಹೊರತಾಗಿಲ್ಲ… ಆರ್ಥಿಕ ಹೊಡೆತದಿಂದ ಹೊರಬರಲು ಸಚಿವರು ಮತ್ತು ಶಾಸಕರ ವೇತನಕ್ಕೆ ಕತ್ತರಿ ಹಾಕಲು ಮುಂದಾಗಿದೆ..

ಸಚಿವರು ಶಾಸಕರ ಶೇ.30 ರಷ್ಟು ವೇತನ ಕಡಿತಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದರು. ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಸಲಾಯಿತು. ಸಭೆಯಲ್ಲಿ ಕೊರೋನಾ ನಿಯಂತ್ರಣ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಸಭೆ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ, ಪದ್ಮಪ್ರಶಸ್ತಿಗಳ ಆಯ್ಕೆಗೆ ಸಿಎಸ್ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ ರಚನೆಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ನಡುವೆ 2012ರಿಂದಲೂ ಬಾಕಿ ಉಳಿದಿರುವ ಮನೆಗಳ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಲಾಗಿದ್ದು 9.74 ಲಕ್ಷ ಮನೆಗಳ ನಿರ್ಮಾನಕ್ಕೆ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಇದಕ್ಕೆ 10 ಸಾವಿರ ಅನುದಾನ ಬಿಡುಗಡೆಗೆ ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಸಚಿವರು ಶಾಸಕರ ಶೇ.30 ರಷ್ಟು ವೇತನ ಕಡಿತಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights