lockdown: ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಕೊರೊನಾ ವೈರಸ್‌ ಆಕ್ರಮಣ ಹೆಚ್ಚಾಗುತ್ತಿದೆ. ಅದರಲ್ಲಿಯೂ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮಳೆಯ ಜೊತೆಗೆ ಕೊರೊನಾ ಅಬ್ಬರವೂ ಪೈಪೋಟಿ ನಡೆಸುತ್ತಿದೆ. ಹಾಗಾಗಿ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡಬೇಕು ಎಂಬ ಅಭಿಪ್ರಾಯ ಸಾರ್ವಜನಿಕ ವಲಯವೂ ಸೇರಿದಂತೆ, ಶಾಸಕರೂ ವ್ಯಕ್ತಪಡಿಸಿದ್ದಾರೆ.

ಇಂದು ಈ ಕುರಿತು ಶಾಸಕರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸಭೆ ನಡೆಸಿದ್ದು, ಲಾಕ್‌ಡೌನ್‌ ಬಗ್ಗೆ ಚರ್ಚಿಸಲಾಗಿದೆ.

ಪ್ರಸ್ತುತ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ರಾಜ್ಯವು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಲಾಕ್‌ಡೌನ್‌ ಮತ್ತಷ್ಟು ಸಂಕಷ್ಟಕ್ಕೆ ಗುರಿಯಾಗಿಸಲಿದೆ. ಹಾಗಾಗಿ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ವಪಕ್ಷ ಶಾಸಕರ ಸಭೆ ಕರೆದಿದ್ದೇನೆ. ಅವರ ಜೊತೆ ಚರ್ಚೆ ಮಾಡುತ್ತೇವೆ. ಅವರ ವಿಧಾನದಸಭಾ ಕ್ಷೇತ್ರಗಳಲ್ಲಿ ಕ್ರಮ ಕೈಗೊಳ್ಳಬೇಕು. ಲಾಕ್ ಡೌನ್ ಪ್ರಶ್ನೆಯೇ ಇಲ್ಲ. ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಈಗ ಆರ್ಥಿಕ ಪರಿಸ್ಥಿತಿ ಸಧಾರಿಸುತ್ತಿದೆ. ಹೀಗಾಗಿ ಬೆಂಗಳೂರು ಲಾಕ್‍ಡೌನ್ ಪ್ರಸ್ತಾಪ ಇಲ್ಲ. ವಿಪಕ್ಷಗಳ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿ ಮುಂದುವರಿಯುತ್ತೇವೆ.

ಇನ್ನು ಇದೇ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಆರ್‌. ಅಶೋಕ್ ಅವರೂ ಕೂಡ ಇದೇ ವಿಚಾರವನ್ನು ಸ್ಪಷ್ಟಪಡಿಸಿದ್ದರು. ‘ಪರಿಸ್ಥಿತಿ ಕುರಿತಂತೆ ಚರ್ಚಿಸಲು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಸಚಿವರು, ಎಲ್ಲ ಪಕ್ಷಗಳ ಶಾಸಕರ ಸಭೆ ಕರೆಯಲಾಗಿದೆ. ಇನ್ನಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಈ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights