NLC Boiler ಸ್ಪೋಟ; 6 ಜನ ಸಾವು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

ಉಷ್ಣ ವಿದ್ಯುತ್​ ಸ್ಥಾವರದಲ್ಲಿನ (ನೆವೇಲಿ ಲಿಗ್ನೈಟ್ ಕಾರ್ಪೊರೇಶನ್- NLC ) ಬಾಯ್ಲರ್​ ಸ್ಫೋಟಗೊಂಡ ಪರಿಣಾಮ 6ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿರುವ ಉಷ್ಣ ವಿದ್ಯುತ್‌ ಸ್ಥಾವರದಲ್ಲಿ ನಡೆದಿದೆ.

ಚೆನೈನಿಂದ 180 ಕಿ.ಮೀ ದೂರದಲ್ಲಿರುವ ಕಡಲೂರಿನಲ್ಲಿರುವ ಸರ್ಕಾರಿ ಸ್ವಾಮ್ಯದ ನೇವೆಲಿ ಲಿಗ್ನೈ​ಟ್​ ಪ್ಲಾಂಟ್​ನಲ್ಲಿ ಈ ಸ್ಫೋಟ ಸಂಭವಿಸಿದೆ. ಘಟನೆ ವೇಳೆ ಸಾಕಷ್ಟು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಸ್ಫೋಟದ ರಭಸಕ್ಕೆ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಫೋಟಗೊಂಡ ಬಾಯ್ಲರ್​ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆದಾಗ್ಯೂ ಇದು ಹೇಗೆ ಸ್ಫೋಟಗೊಂಡಿತು ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಎರಡು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾಯ್ಲರ್​ ಸ್ಫೋಟವಾಗಿದೆ. ಮೇ ತಿಂಗಳಲ್ಲಿ ಈ ಪ್ಲಾಂಟ್​ನಲ್ಲಿ ಬಾಯ್ಲರ್​ ಸ್ಫೋಟಗೊಂಡು 6 ಜನರಿಗೆ ಗಂಭೀರ ಗಾಯಗಳಾಗಿದ್ದವು. ಕಾರ್ಖಾನೆಯಿಂದ ಭಾರೀ ಪ್ರಮಾಣದ ಹೊಗೆ ಬರುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights