SSLC ಪರೀಕ್ಷೆ ಬರೆದ ವಿದ್ಯಾರ್ಥಿಗೆ ಕೊರೊನಾ; ಸಹ ವಿದ್ಯಾರ್ಥಿಗಳು, ಶಿಕ್ಷಕರಲ್ಲಿ ಆತಂಕ!

ಕೊರೊನಾ ಭೀತಿಯ ನಡೆವೆಯೇ ಸರಕಾರ SSLC ಪರೀಕ್ಷೆ ನಡೆಸುತ್ತಿದೆ. ಆದರೆ ಎಸ್ಎಸ್ಎಲ್ ಸಿ ಪರೀಕ್ಷೆಗೆ ಬರೆದಿರುವ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಆತಂಕ ಎದುರಾಗಿದೆ.

ಹಾಸನ ಜಿಲ್ಲೆಯ ಅರಕಲಗೋಡಿನ ಮಲ್ಲಿಪಟ್ಟಣ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಜೂನ್ 25ರಂದು ಆರಂಭವಾದ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದ. ಅಲ್ಲದೇ ಇಂದು ನಡೆಯುತ್ತಿರುವ ಗಣಿತ ಪರೀಕ್ಷೆಯನ್ನೂ ಬರೆದಿದ್ದಾರೆ. ಆದರೆ ಪರೀಕ್ಷೆ ಬರೆಯುತ್ತಿದ್ದ ವೇಳೆಯಲ್ಲಿಯೇ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗುತ್ತಿದ್ದಂತೆಯೇ ಪರೀಕ್ಷಾ ಕೇಂದ್ರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ತಾಲೂಕು ಆಡಳಿತವೇ ಎಸ್ ಎಸ್ ಎಲ್ ಸಿ ಪರಿಕ್ಷೇ ಬರೆಯುತ್ತಿರುವ ಸ್ಥಳಕ್ಕೆ ದೌಡಯಿಸಿತು. ಅಷ್ಟೇ ಅಲ್ಲ ಸೋಂಕಿತನನ್ನು ಪರಿಕ್ಷೇ ಮಾಡಿದ ದಾದಿಯರಲ್ಲಿ ಕೂಡ ಆತಂಕ ಸೃಷ್ಟಿ ಮಾಡಿದೆ.

ಹಲವು ದಿನಗಳಿಂದಲೂ ವಿದ್ಯಾರ್ಥಿಗೆ ಅನಾರೋಗ್ಯದ ಸಮಸ್ಯೆಯಿತ್ತು. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಗಂಟಲು ದ್ರವವನ್ನು ಸಂಗ್ರಹಿಸಲಾಗಿತ್ತು. ಆದ್ರಿಂದು ಕೊರೊನಾ ತಪಾಸಣಾ ವರದಿ ಬಂದಿದ್ದು, ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಆತನ ಸಂಪರ್ಕದಲ್ಲಿ ಇದ್ದವರನ್ನೂ ಕೂಡ ಕ್ವಾರಂಟೈನ್ ಗೆ ಒಳಪಡಿಸುವ ಸಾಧ್ಯತೆಯಿದೆ.

ಶಾಲೆಗೆ ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂಧಿಗಳು ಭೇಟಿ ನೀಡಿದ್ದಾರೆ. ಎರಡು ಪರೀಕ್ಷೆಗಳಿಗೆ ಹಾಜರಾಗಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಪತ್ತೆಯಾಗಿರುವುದು ಇದೀಗ ಅರಕಲಗೋಡು ತಾಲೂಕಿನಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಶಾಲೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡುವುದರ ಜೊತೆಗೆ ಪರೀಕ್ಷಾ ಕೇಂದ್ರವನ್ನೇ ಬೇರೆಡೆಗೆ ವರ್ಗಾಯಿಸುವ ಸಾಧ್ಯತೆಯಿದೆ.

ಬಾಗಲಕೋಟೆಯಲ್ಲಿ ಕೊರೊನಾ ವಿದ್ಯಾರ್ಥಿಗಳನ್ನು ಕಾಡುತ್ತಿದೆ. SSಐಅ ಪರೀಕ್ಷೆ ಬರೆಯಬೇಕಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್​ 19 ಪಾಸಿಟಿವ್​​ ಪತ್ತೆಯಾಗಿದೆ. ಈ ವಿದ್ಯಾರ್ಥಿಗಳಿಗೆ ಬಾಗಲಕೋಟೆ ಜಿಲ್ಲಾ ಕೋವಿಡ್​ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಪಾಸಿಟಿವ್​ ಇದ್ದಿದ್ದು ಪತ್ತೆಯಾಗಿದೆ ಅಂತ ಡಿಡಿಪಿಐ ಶ್ರೀಶೈಲ ಬಿರಾದಾರ ಮಾಹಿತಿ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳು ಮೊದಲ ದಿನ ಪರೀಕ್ಷೆಗೆ ಹಾಜರಾಗಿದ್ದರು. ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್ ವೇಳೆ ಶೀತ, ನೆಗಡಿ, ಕೆಮ್ಮಿನ ಲಕ್ಷಗಳಿದ್ದವು. ಒಟ್ಟು ಏಳು ಜನ ವಿದ್ಯಾರ್ಥಿಗಳಲ್ಲಿ ಆ ಲಕ್ಷಣ ಕಾಣಿಸಿದ್ದವು. ಹಾಗಾಗಿ ಆ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ಸದ್ಯ ಆ ಏಳು ಜನ ವಿದ್ಯಾರ್ಥಿಗಳ ಪೈಕಿ ಇಬ್ಬರಲ್ಲಿ ಪಾಸಿಟವ್ ಕಂಡು ಬಂದಿದ್ದು, ಉಳಿದ ವಿದ್ಯಾರ್ಥಿಗಳಲ್ಲಿ ನೆಗಟಿವ್ ಇದೆ. ಪಾಸಿಟಿವ್ ಬಂದಿರುವ ಇಬ್ಬರು ವಿದ್ಯಾರ್ಥಿಗಳಿಗೆ ಉಳಿದ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಮುಂಬರುವ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು. ಅದನ್ನು ಪೂರಕ ಪರೀಕ್ಷೆ ಎನ್ನದೇ ಮೊದಲ ಪರೀಕ್ಷೆ ಎಂದೇ ಪರಿಗಣಿಸಲಾಗಿತ್ತೆ ಅಂತಾ ಡಿಡಿಪಿಐ ಶ್ರೀಶೈಲ ಬಿರಾದಾರ ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights