ಅಮೆರಿಕಾದಲ್ಲಿ ಒಂದೇ ದಿನ 66 ಸಾವಿರ ಕೊರೊನಾ ಪ್ರಕರಣಗಳು: ಭಾರತದಲ್ಲಿ 28,000 ಹೊಸ ಪ್ರಕರಣ ಪತ್ತೆ!

ಫೆಬ್ರವರಿ ತಿಂಗಳಿನಿಂದ ಜತ್ತಿನಾದ್ಯಂತ ಆವರಿಸಿಕೊಂಡಿರುವ ಕೊರೊನಾ ಸೋಂಕಿನ ಹರಡುವಿಕೆ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಇದವರೆಗೂ ಎಲ್ಲಾ ರಾಷ್ಟ್ರಗಳಲ್ಲಿ ಸುಮಾರು 1.25 ಕೋಟಿ ಜನರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ.

ವಿಶ್ವದ ದೊಡ್ಡಣ್ಣ ಎನ್ನಿಸಿಕೊಂಡಿರುವ ಅಮೆರಿಕಾದಲ್ಲಿ ಕೊರೊನಾ ಸೋಂಕಿತರ ಗಾತ್ರವೂ ದೊಡ್ಡದೇ ಆಗಿದೆ. ಅಮೆರಿಕಾದಲ್ಲಿ ಕಳೆದ 24 ಗಂಟೆಗಳಲ್ಲಿ 66,528 ಹೊಸ ಕೊರೊನಾ ಪ್ರಕರಣಗಳು ವರಿದಯಾಗಿವೆ. ಇದರಿಂದಾಗಿ ಇಲ್ಲಿಯವರೆಗೆ ಯುಎಸ್‌ನಲ್ಲಿ ಒಟ್ಟು ಸೊಂಕಿತರ ಸಂಖ್ಯೆ 3.18 ಮಿಲಿಯನ್’ಗೆ ಏರಿಕೆಯಾಗಿದೆ.ಅಲ್ಲದೆ,  ಶನಿವಾರ ಒಂದೇ ದಿನ  774 ಸೋಂಕಿತರು ಅಮೆರಿಕಾದಲ್ಲಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 133,969ಕ್ಕೆ ಏರಿಕೆ ಆಗಿದೆ.

ಇನ್ನು ಭಾರತದಲ್ಲಿ, ಶನಿವಾರ ಒಂದೇ ದಿನ 28,637 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ದೇಶದ ಕೊರೊನಾ ಪೀಡಿತರ ಸಂಖ್ಯೆ 8,49,553ಕ್ಕೆ ಏರಿಕೆಯಾಗಿದೆ. ಅಲ್ಲದೆ, ಶನಿವಾರ 551 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 22,674ಕ್ಕೆ ಏರಿಕೆಯಾಗಿದೆ.

ಶನಿವಾರದ ವರೆಗೆ ಕೊರೊನಾ ಸೋಂಕಿನಿಂದ ಗುಣಮುಖ ಆದವರು 5,34,620 ಜನ ಮಾತ್ರ. ದೇಶದಲ್ಲಿ ಇನ್ನೂ 2,92,258 ಜನರಲ್ಲಿ ಕೊರೊನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights