ಕೊರೊನಾ ವೈರಸ್‌ಗೆ ಹೆದರಿ ಸೋಂಕಿತೆ ಆತ್ಮಹತ್ಯೆ!

ಕೊರೋನಾ ವೈರಸ್‌ಗೆ ಹೆದರಿ ಸೋಂಕಿತ ರೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆಸಿದೆ. ನಿನ್ನೆ (ಗುರುವಾರ) ಮಧ್ಯರಾತ್ರಿ 2.30ರ ವೇಳೆಗೆ ಕೊರೊನಾ ಆಸ್ಪತ್ರೆಯಲ್ಲಿ  ರೋಗಿಗಳಿಗಾಗಿ ಮೀಸಲಿಟ್ಟಿದ್ದ ವಾರ್ಡ್​ನಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಕೊರೋನಾ ಸೋಂಕಿತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ 2 ತಿಂಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಕೊರೋನಾ ರೋಗಿ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ್ದ. ನಿನ್ನೆ ಮತ್ತೋರ್ವ ಮಹಿಳೆ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಎರಡನೇ ಕೊರೋನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಬಲಿಯಾದಂತಾಗಿದೆ. ಕೆಸಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ 60 ವರ್ಷದ ಕೊರೋನಾ ಸೋಂಕಿತ ಮಹಿಳೆ ಸಾವನ್ನಪ್ಪಿದವರು.

ಕುಣಿಗಲ್ ಮೂಲದ ಮಹಿಳೆ‌ ರಾಜಗೋಪಾಲನಗರದಲ್ಲಿ ವಾಸವಾಗಿದ್ದರು. ಜೂನ್ ತಿಂಗಳ 18ರಂದು ಕೊರೋನಾ ಸೋಂಕು ಕಾಣಿಸಿಕೊಂಡು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ತಡರಾತ್ರಿ 2.30ಕ್ಕೆ ಕೆಸಿ ಜನರಲ್ ಆಸ್ಪತ್ರೆಯ ಕೊರೊನಾ ವಾರ್ಡ್‌ನಲ್ಲಿ ತನ್ನ ಸೀರೆಯಲ್ಲಿ ನೇಣು ಬಿಗಿದುಕೊಂಡು ಈ ಮಹಿಳೆ ಸಾವನ್ನಪ್ಪಿದ್ದಾರೆ.

ಈ ಕೊರೋನಾ ಸೋಂಕಿತ ಮಹಿಳೆಯ ಮಗ, ಸೊಸೆ ಹಾಗೂ ಮೊಮ್ಮಗ ಕೂಡ ಸೋಂಕು ಕಾಣಿಸಿಕೊಂಡು ಆಸ್ಪತ್ರೆ ಸೇರಿದ್ದರು. ಇದೇ ಕಾರಣದಿಂದ ಖಿನ್ನತೆಯಿಂದ ಅಥವಾ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights