ಕೊರೊನಾದಿಂದ ದೇವರೇ ನಮ್ಮನ್ನು ಕಾಪಾಡಬೇಕು: ಶ್ರೀರಾಮುಲು

ವಿಶ್ವದಲ್ಲೇ ಕೊರೊನಾ ಅಟ್ಟಹಾಸ ಹೆಚ್ಚಾಗಿದೆ, ನಮ್ಮಲ್ಲೂ ಕೂಡ ಮುಂದಿನ ಎರಡು ತಿಂಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ, ಅಗಸ್ಟ್ ಮತ್ತು ಸೆಪ್ಟಂಬರ್ ನಲ್ಲಿ ಪೀಕ್ ಮುಟ್ಟುವ ಸಾಧ್ಯತೆ ಇದೇ, ಇದರಿಂದ  ದೇವರೇ ನಮ್ಮನ್ನು ಕಾಪಾಡಬೇಕು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ…

ಮುಂದಿನ‌ ಎರಡು ತಿಂಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ದೇವರೇ ನಮ್ಮನ್ನು ಕಾಪಾಡಬೇಕು ಎಂದು ಸರ್ಕಾರದ ಕರ್ತವ್ಯವನ್ನ ದೇವಹ ಹೆಗಲಿಗೆ ಹೊರಿಸಿದ್ದಾರೆ.

ಇವತ್ತು ಕೊರೊನಾ ನಿಯಂತ್ರಣ ಯಾರ ಕೈಯಲ್ಲಿದೆ ಹೇಳಿ? ದೇವರೇ ನಮ್ಮನ್ನು ಕಾಪಾಡಬೇಕು, ಕಾಂಗ್ರೆಸ್‌ನವರು ಇಂತಹ‌ ಸಮಯದಲ್ಲಿ ರಾಜಕಾರಣ ಮಾಡಬಾರದು, ಅವರಿಗೆ ಶೋಭೆ ತರುವುದಿಲ್ಲ, ನಾವೇನಾದರೂ ತಪ್ಪು ಮಾಡಿದ್ದರೆ ಪ್ರಾಯಶ್ಚಿತ್ತ ನಿಭಾಯಿಸಲು ಸಿದ್ದರಿದ್ದೇವೆ ಎಂದಿದ್ದಾರೆ ಸಚಿವ ಶ್ರೀರಾಮುಲು.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ವಿಶ್ವದಲ್ಲೇ ಕೊರೊನಾ ಅಟ್ಟಹಾಸ ಹೆಚ್ಚಾಗಿದೆ, ನಮ್ಮಲ್ಲೂ ಕೂಡ ಮುಂದಿನ ಎರಡು ತಿಂಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿದರು. ಸೋಂಕು ಹೆಚ್ಚಲು ಸರ್ಕಾರದ ನಿರ್ಲಕ್ಷ್ಯವೇ ಕಾರಣ, ಸಚಿವರ ಹೊಂದಾಣಿಕೆಯ ಕೊರತೆಯೇ ಕಾರಣ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ, ಈ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದ ಮಾತು ಎಂದು ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

ಆ ಮೂಲಕ ಇನ್ನೆರಡು ತಿಂಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಆರೋಗ್ಯ ಸಚಿವರು, ಕೊರೊನಾ ನಿಯಂತ್ರಣ ನಮ್ಮಿಂದ ಸಾಧ್ಯವಿಲ್ಲ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡು ಜವಬ್ದಾರಿಯನ್ನು ಕೈಚೆಲ್ಲಿದ್ದಾರೆ. ಆದರೆ ವಿರೋದ ಪಕ್ಷಗಳ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಕ್ಕೆ ತಕ್ಕ ಉತ್ತರ ನೀಡುವಲ್ಲಿ ಮಾತ್ರ ವಿಪಲರಾಗುತ್ತಿದ್ದಾರೆ…

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights