ಬೆಂಗಳೂರು ಮತ್ತೇ ಲಾಕ್‌ಡೌನ್: ಮಾಹಿತಿ ನೀಡಿದ ಮುಖ್ಯಮಂತ್ರಿ

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಜುಲೈ 14ರ ಮಂಗಳವಾರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್‌ಡೌನ್ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಮುಖ್ಯಮಂತ್ರಿ “ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು.” ಎಂದು ಬರೆದಿದ್ದಾರೆ.

ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ನಿಗದಿಯಾಗಿರುವಂತೆ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸಲಾಗುವುದು ಎಂದಿರುವ ಯಡಿಯೂರಪ್ಪ, ಲಾಕ್ ಡೌನ್ ಸಂದರ್ಭದಲ್ಲಿ ಜನರು ಯಾವುದೇ ಆತಂಕಕ್ಕೆ ಒಳಗಾಗದೇ ಸಹಕರಿಸಲು ಕೋರಿದ್ದಾರೆ.


ಓದಿ: ಸಿಎಂ ಗೃಹ ಕಚೇರಿ ಸಿಬ್ಬಂದಿಗೆ ಕೊರೊನಾ: Work From Home ಮಾಡುವೆನೆಂದ ಯಡಿಯೂರಪ್ಪ!


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights