ಸಚಿನ್ ಪೈಲಟ್ ಅವರನ್ನು ಪಕ್ಷದಿಂದ ಕೈಬಿಟ್ಟ ರಾಜಸ್ತಾನ ಕಾಂಗ್ರೆಸ್….

ರಾಜಸ್ತಾನ ರಾಜಕೀಯ ಸದ್ಯ ಸಾಕಷ್ಟು ಕುತೂಹಲ ಕೆರಳಿಸಿದ್ದು ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರನ್ನು ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಪಕ್ಷದಿಂದ ಹೊರಹಾಕಲಾಗಿದೆ.

ಕೋವಿಡ್ 19 ವೈರಸ್ ಭೀತಿಯ ನಡುವೆಯೇ ರಾಜಸ್ಥಾನ ಸರಕಾರದಲ್ಲಿ ಮುಖ್ಯಮಂತ್ರಿ ಅಶೋಕ್ ಪೈಲಟ್ ಮತ್ತು ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಮುಸುಕಿನ ಗುದ್ದಾಟ ಇದೀಗ ತಾರಕಕ್ಕೇರಿದೆ.

ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರನ್ನು ಪಕ್ಷದಿಂದ ಹೊರಹಾಕಬೇಕೆಂದು ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಶಾಸಕರು ಒತ್ತಾಯಿಸಿದ್ದರು.ಸಚಿನ್ ಪೈಲಟ್ ಅವರೊಂದಿಗೆ ಕುದುರೆ ವ್ಯಾಪಾರದಲ್ಲಿ ತೊಡಗುವ ಮೂಲಕ ಬಿಜೆಪಿ ತನ್ನ ಸರ್ಕಾರವನ್ನು ಉರುಳಿಸಲು ಸಂಚು ರೂಪಿಸಿದೆ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಆರೋಪಿಸಿದ್ದು ಪೈಲಟ್ ಅವರನ್ನು ಪಕ್ಷದಿಂದ ಕೈಬಿಡಲಾಗಿದೆ.

ಉಪಮುಖ್ಯಮಂತ್ರಿ ಸಚಿನ್ ಪೈಲಟ್ 16 ಶಾಸಕರೊಂದಿಗೆ ದೆಹಲಿಯಲ್ಲಿ ಬೀಡುಬಿಟ್ಟಿರುವ ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದು, 10 ಸೆಕೆಂಡ್ ಗಳ ವಿಡಿಯೋದಲ್ಲಿ ಶಾಸಕರಾದ ಇಂದ್ರರಾಜ್ ಗುರ್ಜರ್, ಮುಖೇಶ್ ಭಾಕರ್, ಹರೀಶ್ ಮೀನಾ ಸೇರಿದಂತೆ ಇತರರು ಇದ್ದಾರೆ.

https://twitter.com/ANI/status/1282728941594144768?ref_src=twsrc%5Etfw%7Ctwcamp%5Etweetembed%7Ctwterm%5E1282728941594144768%7Ctwgr%5E&ref_url=https%3A%2F%2Fvijaykarnataka.com%2Fnews%2Findia%2Fsachin-pilot-camp-releases-video-of-supporting-mlas-meeting-in-resort%2Farticleshow%2F76952043.cms

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights