ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಕೊರೊನಾ ಪಾಸಿಟಿವ್! ಖಾಸಗಿ ಆಸ್ಪತ್ರೆಗೆ ದಾಖಲು

ರಾಜ್ಯ ಕಾಂಗ್ರೆಸ್ (ಕೆಪಿಸಿಸಿ)‌ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಜ್ವರ ಹಾಗೂ ಬೆನ್ನು ನೋವಿಗೆ ಒಳಗಾಗಿದ್ದ ಡಿಕೆ ಶಿವಕುಮಾರ್ ಅವರು ಎರಡು ದಿನಗಳ ಹಿಂದೆ ಕೊರೊನಾ ಪರೀಕ್ಷೆ ಮಾಡಿಸಿದ್ದರು. ಇಂದು ವರದಿ ಬಂದಿದ್ದು, ಪಾಸಿಟಿವ್ ದೃಢಪಟ್ಟಿದೆ.

ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಎದುರಾದ ಪ್ರವಾಹದಿಂದಾಗಿ, ಪ್ರವಾಹಕ್ಕೆ ಒಳಗಾದ ಪ್ರದೇಶಗಳಿಗೆ ನಿರಂತರವಾಗಿ ಡಿಕೆ ಶಿವಕುಮಾರ್ ಭೇಟಿ ನೀಡುತ್ತಿದ್ದರಿಂದಾಗಿ, ಅವರಿಗೆ ಕೊರೊನಾ ಸೋಂಕು ತಗುಲಿರಬಹುದು ಎಂದು ಹೇಳಲಾಗುತ್ತಿದೆ.

ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವುದು ನೋವು ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಅವರಿಗೆ ಕೋವಿಡ್‌ ಇರುವುದಾಗಿ ತಿಳಿಯಿತು. ಕೊರೊನಾ ವೈರಸ್‌ ಸೋಂಕಿನಿಂದ ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights