ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆ!

ಮುಂದಿನ ವರ್ಷ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರು ತಮಿಳುನಾಡಿನ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಜೆಪಿ ಸೇರುವುದಾಗಿ ಅಣ್ಣಾಮಲೈ ಘೋಷಿಸಿದ್ದಾರೆ.

ಕರ್ನಾಟಕದಲ್ಲಿ ಸುಮಾರು 10 ವರ್ಷಗಳ ಕಾಲ ಸೇವೆ ಸಲ್ಲಿದ್ದ ಅಣ್ಣಾಮಲೈ 2019ರಲ್ಲಿ ಐಪಿಎಸ್‌ ವೃತ್ತಿಗೆ ರಾಜೀನಾಮೆ ನೀಡಿದ್ದರು. ಆ ಸಂದರ್ಭದಲ್ಲಿ ಅಣ್ಣಾಮಲೈ ಬಿಜೆಪಿ ಸೇರುವ ಸಾಧ್ಯತೆಗಳಿವೆ ಎಂದು ಸಾಮಾಜಿಕ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ, ತಾನು ಯಾವುದೇ ಪಕ್ಷಕ್ಕೂ ಸೇರುವುದಿಲ್ಲ. ನಾನು ಕೃಷಿ ಮಾಡಲು ಬಯಸಿದ್ದೇನೆ ಎಂದಿದ್ದ ಅಣ್ಣಾಮಲೈ ಈಗ ಬಿಜೆಪಿ ಪಕ್ಷಕ್ಕೇ ಸೇರ್ಪಡೆಯಾಗಲು ಮುಂದಾಗಿದ್ದಾರೆ.

ಬಿಜೆಪಿ ರಾಷ್ಟ್ರೀಯತೆಯನ್ನು ಎತ್ತಿ ಹಿಡಿಯುವ ಪಕ್ಷವಾಗಿದ್ದು, ರಾಷ್ಟ್ರೀಯತೆಗೆ ಮೊದಲ ಆದ್ಯತೆ ನೀಡುತ್ತೇನೆ. ಬಿಜೆಪಿಯಿಂದ ತಮಿಳುನಾಡಿಗೆ ಹೊಸ ಮಾರ್ಗದರ್ಶನ ಸಿಗಲಿದೆ ಎಂದು ಭಾವಿಸಿದ್ದೇನೆ. ಸಾಮಾಜಿಕ ಬದಲಾವಣೆಗಿಂತ ರಾಜಕೀಯ ಬದಲಾವಣೆ ಪ್ರಮುಖವಾದದ್ದು ಎಂದು ಭಾವಿಸಿದ್ದು, ಯಾವುದೇ ಷರತ್ತು ಇಲ್ಲದೆ ಬಿಜೆಪಿ ಸೇರುತ್ತಿದ್ದೇನೆ ಎಂದು ಅಣ್ಣಾಮಲೈ ಹೇಳಿದ್ದಾರೆ.


Read Also: ಬಿಜೆಪಿಯಿಂದ ಅಸ್ಸಾಂ ಮುಖ್ಯಮಂತ್ರಿ ಅರ್ಭರ್ಥಿಯಾಗಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಜೆಐ ರಂಜನ್ ಗೊಗೊಯ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights