ಮಹಾರಾಷ್ಟ್ರದಲ್ಲಿ ಬಹುಮಹಡಿ ಕಟ್ಟಡ ಕುಸಿತ : 25ಕ್ಕೂ ಹೆಚ್ಚು ಜನ ಸಾವು!

ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯಲ್ಲಿ ಸೋಮವಾರ ಸಂಜೆ ವಸತಿ ಕಟ್ಟಡ ಕುಸಿದು ಓರ್ವ ವ್ಯಕ್ತಿ ಮೃತಪಟ್ಟಿದ್ದು, 25 ಮಂದಿ ಇನ್ನೂ ಅವಶೇಷದಲ್ಲಿ ಸಿಲುಕಿಕೊಂಡಿದ್ದಾರೆ. ಇದರಲ್ಲಿ ಈಗಾಗಲೇ ಅರವತ್ತು ಜನರನ್ನು ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಎನ್‌ಡಿಆರ್‌ಎಫ್‌ನ ಮೂರು ತಂಡಗಳು (ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ) ಮತ್ತು ಅಗ್ನಿಶಾಮಕ ದಳದ 12 ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಸುಮಾರು 10 ವರ್ಷಗಳಷ್ಟು ಹಳೆಯದಾದ ಐದು ಅಂತಸ್ತಿನ ಕಟ್ಟಡ 45 ಕ್ಕೂ ಹೆಚ್ಚು ಫ್ಲ್ಯಾಟ್‌ಗಳನ್ನು ಹೊಂದಿದೆ.

“ನನ್ನ ಆಲೋಚನೆಗಳು ತಮ್ಮ ಆತ್ಮೀಯರನ್ನು ಕಳೆದುಕೊಂಡವರ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಬೇಕೆಂದು ನಾನು ಪ್ರಾರ್ಥಿಸುತ್ತೇನೆ. ಸ್ಥಳೀಯ ಅಧಿಕಾರಿಗಳು ಮತ್ತು ಎನ್ಡಿಆರ್ಎಫ್ ತಂಡಗಳು ದುರಂತದ ಸ್ಥಳದಲ್ಲಿದ್ದು, ಸಾಧ್ಯವಿರುವ ಎಲ್ಲಾ ನೆರವು ಒದಗಿಸುತ್ತವೆ. “ಎಂದು ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಮಾಡಿದ ಟ್ವೀಟ್‌ನಲ್ಲಿ ಈ ಘಟನೆಯನ್ನು “ದುರಂತ” ಎಂದು ಬಣ್ಣಿಸಿದ್ದಾರೆ. ವಿಪತ್ತು ಪ್ರತಿಕ್ರಿಯೆ ಪಡೆಯ ಮುಖ್ಯಸ್ಥ ಎಸ್‌ಎನ್ ಪ್ರಧಾನ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದರು.

https://twitter.com/satyaprad1/status/1298072221533913089?ref_src=twsrc%5Etfw%7Ctwcamp%5Etweetembed%7Ctwterm%5E1298072221533913089%7Ctwgr%5E&ref_url=https%3A%2F%2Fwww.ndtv.com%2Findia-news%2Fone-dead-15-injured-in-building-collapse-in-maharashtras-raigad-60-rescued-2284682

ಇಬ್ಬರು ರಾಜ್ಯ ಸಚಿವರಾದ ಆದಿತ್ಯ ಠಾಕ್ರೆ ಮತ್ತು ಏಕನಾಥ ಶಿಂಧೆ ನಿನ್ನೆ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

https://twitter.com/satyaprad1/status/1298072221533913089?ref_src=twsrc%5Etfw%7Ctwcamp%5Etweetembed%7Ctwterm%5E1298072221533913089%7Ctwgr%5E&ref_url=https%3A%2F%2Fwww.ndtv.com%2Findia-news%2Fone-dead-15-injured-in-building-collapse-in-maharashtras-raigad-60-rescued-2284682

ಕಟ್ಟಡದ ಗುತ್ತಿಗೆದಾರ ಯೂನುಸ್ ಶೇಖ್ ಮತ್ತು ವಾಸ್ತುಶಿಲ್ಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

“ದುರಂತಕ್ಕೆ ಗುತ್ತಿಗೆದಾರರೇ ಕಾರಣ ಮತ್ತು ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ, ಯಾವುದೇ ಸರ್ಕಾರಿ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಶ್ರೀ ಶಿಂಧೆ ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights