ರಾಜ್ಯದಲ್ಲಿ ಅತಿವೃಷ್ಟಿ: ಹೆಚ್ಚಿನ ಪರಿಹಾರಕ್ಕಾಗಿ ಮುಂದಿನ ವಾರ ಸಿಎಂ ದೆಹಲಿಗೆ!

ರಾಜ್ಯದಲ್ಲಿ ಎದುರಾಗಿರುವ ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಎಲ್ಲ ಶಾಸಕರ ಸಭೆ ನಡೆಸಿ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು. ಮುಂದಿನ ವಾರ‌ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದಿಂದ ಹೆಚ್ವಿನ ಪರಿಹಾರ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯ ಬಗ್ಗೆ  ವೈಮಾನಿಕ  ಸಮೀಕ್ಷೆ ನಡೆಸಿದ ಸಿಎಂ, ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಕ್ಕೆ ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಲಭ್ಯವಿದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ 174 ಕೋಟಿ ರೂಪಾಯಿ ಇದೆ. ಇದಲ್ಲದೇ ಉಳಿದಿರುವ ಅನುದಾನದಲ್ಲಿ ರಸ್ತೆ ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದ್ದು, ಹೆಚ್ಚಿನ ಹಣ ಬೇಕಾದರೆ ತಕ್ಷಣವೇ ಬಿಡುಗಡೆ ಮಾಡಲಾಗುವುದು.

ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಕೋವಿಡ್-೧೯ ಇರುವುದರಿಂದ ಎನ್.ಡಿ‌.ಆರ್.ಎಫ್. ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ಮಹೇಶ್ ಕುಮಠಳ್ಳಿ, ಅಥಣಿ ಮತಕ್ಷೇತ್ರದಲ್ಲಿ ಬೆಳೆಹಾನಿ ಮತ್ತು ಮನೆ ಪರಿಹಾರ ಇನ್ನೂ ಪಾವತಿಸುವುದು ಬಾಕಿಯಿದೆ. ರಸ್ತೆಗಳು ಹಾಳಾಗಿರುವುದರಿಂದ ತುರ್ತಾಗಿ 50-60 ಕೋಟಿ ಬಿಡುಗಡೆಗೆ ಆಗ್ರಹಿಸಿದರು.

ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕೆರೆಗಳು ಹಾಗೂ ಬಾಂದಾರಗಳು ಒಡೆದಿರುವುದರಿಂದ ಬೆಳೆ ಕೂಡ ಹಾನಿಯಾಗಿದೆ. ಆದ್ದರಿಂದ ಇವುಗಳ ಶಾಶ್ವತ ದುರಸ್ತಿಗೆ ಮತ್ತು ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

Spread the love

Leave a Reply

Your email address will not be published. Required fields are marked *