ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಕೊರೊನಾ ಸೋಂಕು: ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾ ಸೊಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೇವಣ್ಣ ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಹಿಂದೆ ರೇವಣ್ಣನವರ ಬೆಂಗಾವಲು ಪಡೆಯ 9 ಜನ ಪೊಲೀಸರಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿತ್ತು. ಅವರಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರೇವಣ್ಣನವರಿಗೂ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದೆ.

ಆಗಸ್ಟ್ 25 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಶಿವಲಿಂಗೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights