ಬಿಜೆಪಿ ಸೇರಿದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

ಕಾನೂನುಬಾಹಿರ ಸಭೆ ನಡೆಸಿದ ಆರೋಪದ ಮೇಲೆ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಹಾಗೂ ಬಿಜೆಪಿ ಕಾರ್ಯಕರ್ತರ ವಿರುದ್ಧ ಕೊಯಂಬತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೂರು ದಿನಗಳ ಹಿಂದೆ ಬಿಜೆಪಿ ಸೇರಿದ ಅಣ್ಣಾಮಲೈ  ಕೊಯಂಬತ್ತೂರಿನ  ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಭೇಟಿ ನೀಡಿದ್ದರು. ಈ  ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಅದ್ದೂರಿ ಕಾರ್ಯಕ್ರಮ ನಡೆಸಿದ್ದು, ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿ ಪಕ್ಷದ ಕಚೇರಿಯಲ್ಲಿ ಬಹಳಷ್ಟು ಕಾರ್ಯಕರ್ತರು ಸೇರಿದ್ದಾರೆಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.

ಅಲ್ಲದೇ, ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು.  ಕೆ.ಅಣ್ಣಾಮಲೈ  ವಾಹನವೊಂದರಿಂದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು. ಇದರ ಆಧಾರದ ಮೇಲೆ  ಕೆ.ಅಣ್ಣಾಮಲೈ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ನಂದಕುಮಾರ್, ಬಿಜೆಪಿ ರಾಜ್ಯ ಮಟ್ಟದ ನಾಯಕರಾದ ಜಿಕೆಎಸ್ ಸೆಲ್ವಕುಮಾರ್, ಎಸ್.ಆರ್.ಸೇಕರ್ ಮತ್ತು ಕನಗಸಬಪತಿ ಮತ್ತು ಇತರ ಕೆಲವು ಕಾರ್ಯಕರ್ತರ ವಿರುದ್ಧ ಕತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೆ.ಅಣ್ಣಾಮಲೈ ಹಾಗೂ ಇತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143, 269, 270, 285, 341 ಹಾಗೂ ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3ರ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights