ಪ್ರಶಾಂತ್ ಭೂಷಣ್‌ಗೆ 1 ರೂ ದಂಡ ವಿಧಿಸಿದ ಸುಪ್ರೀಂ: ದಂಡ ನಿರಾಕರಿಸಿದರೆ 3 ವರ್ಷ ವಕೀಲಿಕೆಗೆ ನಿರ್ಬಂಧ!

ಸುಪ್ರೀಂ ಕೋರ್ಟ್‌ನ ಕಾರ್ಯ ವೈಖರಿ ಹಾಗೂ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಟೀಕಿಸಿ, ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿರುವ ಹಿರಿಯ ವಕೀಲ ಹಾಗೂ ಜನಒರ ಚಿಂತಕ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂಕೋರ್ಟ್‌ ಒಂದು ರೂ ದಂಡ ವಿಧಿಸಿದೆ.

ಸೆಪ್ಟೆಂಬರ್ 15 ರೊಳಗೆ ದಂಡವನ್ನು ಕಟ್ಟಬೇಕು. ಇಲ್ಲವಾದಲ್ಲಿ ಮೂರು ತಿಂಗಳ ಜೈಲು ಹಾಗೂ ಮೂರು ವರ್ಷಗಳ ಕಾಲ ವಕೀಲ ವೃತ್ತಿಯನ್ನು ನಿಷೇಧಿಸುವುದಾಗಿ ಸುಪ್ರೀಂ ಕೋರ್ಟ್‌ ಹೇಳಿದೆ.

ಆಗಸ್ಟ್ 5 ರಂದು ಭೂಷಣ್ ವಿರುದ್ಧ ವಿಚಾರಣೆ ಆರಂಭವಾಗಿತ್ತು. ಆಗಸ್ಟ್ 14 ರಂದು ಅವರು ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿ, ಆಗಸ್ಟ್ 20 ರಂದು ಶಿಕ್ಷೆ ಪ್ರಮಾಣ ಘೊಷಿಸುವುದಾಗಿ ಹೇಳಿತ್ತು. ಆದರೆ ಆಗಸ್ಟ್ 20 ರಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ನಿರ್ದೇಶನದಂತೆ ಬೇಷರತ್ ಕ್ಷಮೆಯಾಚಿಸಲು ಭೂಷಣ್ ನಿರಾಕರಿಸಿದರು. ನೀವೆಷ್ಟೇ ಸಮಯ ಕೊಟ್ಟರೂ ತನ್ನ ಪ್ರಯೋಜನವಿಲ್ಲ. ಇತಿಹಾಸದ ಈ ಹಂತದಲ್ಲಿ ನಾನು ಮಾತನಾಡದಿದ್ದರೆ ನಾನು ನನ್ನ ಕರ್ತವ್ಯದಲ್ಲಿ ವಿಫಲವಾಗುತ್ತಿದ್ದೆ. ನ್ಯಾಯಾಲಯವು ವಿಧಿಸಬಹುದಾದ ಯಾವುದೇ ದಂಡವನ್ನು ನಾನು ಸಲ್ಲಿಸುತ್ತೇನೆ. ಕ್ಷಮೆಯಾಚಿಸುವುದಿಲ್ಲ” ಎಂದು ಭೂಷಣ್ ತಿಳಿಸಿದ್ದರು.

“ನನ್ನ ಟ್ವೀಟ್‌ಗಳು ನನ್ನ ನಂಬಿಕೆಯನ್ನು ಪ್ರತಿನಿಧಿಸುತ್ತವೆ. ಷರತ್ತುಬದ್ಧ ಅಥವಾ ಬೇಷರತ್ತಾದ ಕ್ಷಮೆಯು ಈ ನಂಬಿಕೆಗಳಿಗೆ ಅಪ್ರಾಮಾಣಿಕ ಎಂದು ಭಾವಿಸುತ್ತೆನೆ. ಯಾವುದೇ ಕ್ಷಮೆಯಾಚನೆಯು ನ್ಯಾಯಾಲಯವು ಹೇಳಿದಂತೆ ಕೇವಲ ಪ್ರಚೋದನೆಯಾಗಿರಬಾರದು. ಅದು ಪ್ರಾಮಾಣಿಕವಾಗಿರಬೇಕು. ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ” ಎಂದು ಭೂಷಣ್ ನುಡಿದಿದ್ದರು.

ವಕೀಲ, ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ಎಚ್ಚರಿಕೆ ನೀಡಿ, ಪ್ರಕರಣ ಬಿಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಆಗಸ್ಟ್ 25ರಂದು ಮನವಿ ಮಾಡಿದ್ದರು. ನ್ಯಾಯಮೂರ್ತಿ ಅರುಣ್ ಮಿಶ್ರಾ, ಬಿ.ಆರ್ ಗವಾಯಿ ಮತ್ತು ಕೃಷ್ಣಮುರಾರಿಯವರಿದ್ದ ಪೀಠದ ಎದುರು ಭೂಷಣ್ ಪರವಾಗಿ ಹಿರಿಯ ವಕೀಲರಾದ ದುಷ್ಯಂತ್ ಧವೆ ಮತ್ತು ರಾಜೀವ್ ಧವನ್ ವಾದಿಸಿದ್ದರು.


ಇದನ್ನೂ ಓದಿ: ಯೋಚಿಸಿಯೇ ಹೇಳಿಕೆ ನೀಡಿದ್ದೇನೆ; ಹೇಳಿಕೆ ಬದಲಿಸಲು ಸಮಯ ನೀಡುವುದರಿಂದ ಪ್ರಯೋಜನವಿಲ್ಲ: ಪ್ರಶಾಂತ್ ಭೂಷಣ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights