ಚಪ್ಪಾಳೆ, ಗಂಟೆ ಭಾರಿಸಿದ್ದೇ ಕೊರೊನಾ ಏರಿಕೆಗೆ ಕಾರಣ: ದಿನೇಶ್ ಗುಂಡೂರಾವ್

ಪ್ರಧಾನಿ ಮೋದಿಯವರು ದೇಶದ ಜನರಿಗೆ ಕೊರೊನಾ ಓಡಿಸಲು ಚಪ್ಪಾಳೆ, ಗಂಟೆ ಭಾರಿಸಿ, ದೀಪ ಹಚ್ಚಿ ಎಂದು ಭಾವನಾತ್ಮಕವಾಗಿ ಮೀಸಗೊಳಿಸಿದ್ದರ ಪರಿಣಾಮ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯು ವಿಶ್ವದಲ್ಲಿ ಎರಡನೇ ಸ್ಥಾನಕ್ಕೇರಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರೋಪಿಸಿದ್ದಾರೆ.

ಕೊರೊನಾ ವಿರುದ್ಧದ ಹೋರಾಟಕ್ಕೆ ನಾನಾ ರೀತಿಯ ಅಸ್ತ್ರಗಳನ್ನು ಪ್ರಯೋಗಿಸಿರುವ ಬಿಜೆಪಿ ಘೋಷಿತ ‘ವಿಶ್ವಗುರು’ಗಳ ಬತ್ತಳಿಕೆಯಲ್ಲಿ ಕೊರೊನಾ ಸದ್ದಡಗಿಸಲು ಇನ್ಯಾವ ಅಸ್ತ್ರಗಳಿದ್ದಾವೋ..? ಎಂದು ಅವರು ಲೇವಡಿ ಮಾಡಿದ್ದಾರೆ.

ಕೆಲುವು ದಿನಗಳಲ್ಲಿ ವಿಶ್ವದಲ್ಲೇ 1ನೇ ಸ್ಥಾನಕ್ಕೆ ಭಾರತ ಏರುವುದು ನಿಸ್ಸಂದೇಹ. ಜನಸಂಖ್ಯೆ ಹೆಚ್ಚಿರುವುದರಿಂದ ಇದು ಆಶ್ಚರ್ಯಕರ ಸಂಗತಿ ಅಲ್ಲ. ಆದ್ರೆ ನೆರ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ವೈಫಲ್ಯ ಸ್ಪಷ್ಟವಾಗುತ್ತದೆ. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ, ಬರ್ಮಾ, ಶ್ರೀಲಂಕಾ, ಅಫಘಾನಿಸ್ತಾ, ಭೂತಾನ್, ಚೀನಾ ನಮಗಿಂತ ಉತ್ತಮ ಸ್ಥಿತಿಯಲ್ಲಿದ್ದಾರೆ ಎಂದು ದಿನೇಶ್‌ ಗುಂಡೂರಾವ್ ಹೇಳಿದ್ದಾರೆ.


ಇದನ್ನೂ ಓದಿ: ಮೋದಿಯನ್ನು ಯೂಟ್ಯೂನ್‌ನಲ್ಲಿ ತಿಸ್ಕರಿಸುತ್ತಿರುವ ಯುವಜನರು: #StudentsDislikePMModi ಟ್ರೆಂಡಿಂಗ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights