ಮೋದಿಯವರ ಆಟಿಕೆಯ ಮಾತು ವಾಸ್ತವವನ್ನು ಮರೆಮಾಚುವ ಹುನ್ನಾರ: ನಿಖಿಲ್ ಕುಮಾರಸ್ವಾಮಿ

ಪ್ರಧಾನಿ ಮೋದಿಯವರು ತಮ್ಮ ಮನ್‌ ಕೀ ಬಾತ್ ಕಾರ್ಯಕ್ರಮದಲ್ಲಿ ಆಟಿಕೆಯ ಬಗ್ಗೆ ಮಾತನಾಡಿದ್ದು, ಅವರ ಮಾತು ವಾಸ್ತವವನ್ನು ಮರೆಮಾಚುವ ಹುನ್ನಾರವಾಗಿದೆ ಎಂದು ಮಾಜಿ ಸಿಎಂ ಹೆಚ್‌ಡಿಕೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

ಮೋದಿಯವರು ಸ್ಥಳೀಯರಿಗೆ ಆದ್ಯತೆ ನೀಡುವ ಉದ್ದೇಶದಿಂದ ಆಟಿಕೆ ಉತ್ಪಾದನೆಗಳ ಬಗ್ಗೆ ಮಾತನಾಡಿದ್ದರು. ಅವರ ಮಾತಿನ ಅನುಷ್ಠಾನಗೊಳಿಸುತ್ತೇವೆಂದು ಹೇಳಿಕೊಂಡಿರುವ ಸಿಎಂ ಬಿಎಸ್‌ವೈ ಕೊಪ್ಪಳದಲ್ಲಿ ಆಟಿಕೆಗಳ ಉತ್ಪಾದನಾ ಕ್ಲಷ್ಟರ್ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಇದು ವಾಸ್ತವವನ್ನು ಮರೆಮಾಚುವ ಕೆಲಸವಾಗಿದೆ ಎಂದು ನಿಖಿಲ್‌ ಹೇಳಿದ್ದಾರೆ.

2018 ರಲ್ಲಿ ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ  ತಮ್ಮ ಕನಸಿನ ಕೂಸಾಗಿದ್ದ ‘ಕಾಂಪೀಟ್ ವಿತ್ ಚೀನಾ’ ಪರಿಕಲ್ಪನೆಯಡಿ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್ ಸ್ಥಾಪಿಸಲು 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿದ್ದರು. 2019ರಲ್ಲಿ 2000 ಕೋಟಿ ರೂ ಅನುದಾನ ಒದಗಿಸಲು ನಿರ್ಧರಿಸಿದ್ದರು. ಇದನ್ನು ಬಿಜೆಪಿಯವರು ತಮ್ಮದೇ ಎಂಬಂತೆ ಎನ್‌ಕ್ಯಾಚ್‌ ಮಾಡಿಕೊಳ್ಳುತ್ತಿದ್ದಾರೆ ಎಂದು ನಿಖಿಲ್‌ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಉತ್ಪಾದನಾ ವಲಯವನ್ನು ಉತ್ತೇಜಿಸಲು ಸ್ಥಳೀಯ ಸಂಪನ್ಮೂಲಗಳ ಬಳಕೆಗಾಗಿ 9 ಜಿಲ್ಲೆಗಳಲ್ಲಿ ಕನಿಷ್ಠ 9 ಲಕ್ಷ ಸ್ಥಳೀಯರಿಗೆ ಉದ್ಯೋಗಾವಕಾಶ ಒದಗಿಸಲು ಈ ಯೋಜನೆ ಜಾರಿಗೊಳಿಸಲಾಗಿತ್ತು.ಕೊಪ್ಪಳದಲ್ಲಿ ಆಟಿಕೆ, ಕಲಬುರಗಿಯಲ್ಲಿ ಸೋಲಾರ್ ವಿದ್ಯುತ್ ಉಪಕರಣ, ಹಾಸನದಲ್ಲಿ ಟೈಲ್ಸ್ ಮತ್ತು ಸ್ಯಾನಿಟರಿ ಉತ್ಪನ್ನ, ಮೈಸೂರಿನಲ್ಲಿ ಪಿಸಿಬಿ ತಯಾರಿಕೆ, ಬಳ್ಳಾರಿಯಲ್ಲಿ ವಸ್ತ್ರೋದ್ಯಮ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮೊಬೈಲ್ ಬಿಡಿಭಾಗಗಳ ತಯಾರಿಕೆ, ತುಮಕೂರಿನಲ್ಲಿ ಸ್ಪೋರ್ಟ್ಸ್ ಮತ್ತು ಫಿಟ್ನೆಸ್ ಉಪಕರಣ ತಯಾರಿಕಾ ಘಟಕಗಳನ್ನು ಸ್ಥಾಪಿಸಿ ಸ್ಥಳೀಯರಿಗೆ ಉದ್ಯೋಗ ನೀಡಲು ಮೈತ್ರಿ ಸರ್ಕಾರ ಮುಂದಾಗಿತ್ತು ಎಂದು ಅವರು ಹೇಳಿದ್ದಾರೆ.

ಇದರ ಭಾಗವಾಗಿ ಪ್ರಾರಂಭವಾಗುತ್ತಿರುವ ಕೊಪ್ಪಳ ಆಟಿಕೆ ತಯಾರಿಕಾ ಕ್ಲಸ್ಟರ್, ಅಲ್ಲಿನ ಸ್ಥಳೀಯರಿಗೆ ಉದ್ಯೋಗ ನೀಡುವ ಮೂಲಕ ಉದ್ಯೋಗಕ್ಕಾಗಿ ಕೊಪ್ಪಳದ ಯುವ ಜನತೆ ಬೆಂಗಳೂರನ್ನು ಅವಲಂಬಿಸುವುದು ಕಡಿಮೆಯಾಗಲಿ, ಈ ಮೂಲಕ ತಮ್ಮ ಮಾತೃ ಜಿಲ್ಲೆಗಳಲ್ಲೇ ಯುವಕರಿಗೆ ಕೆಲಸ ಸಿಗುವಂತಾಗಲಿ ಎಂದು ಆಶಿಸುತ್ತೇನೆ ಎಂದು ನಿಖಿಲ್ ಒತ್ತಾಯಿಸಿದ್ದಾರೆ.


Read Also: ವಿಶ್ವನಾಥ್‌, ಎಂಟಿಬಿ ನಾಗರಾಜ್‌, ಶಂಕರ್‌ಗೆ ಸಚಿವ ಸ್ಥಾನ ನೀಡದಂತೆ ಹೈಕೋರ್ಟ್‌ನಲ್ಲಿ ಅರ್ಜಿ; ಹಳ್ಳಿಹಕ್ಕಿಗಿಲ್ವಾ ಸಚಿವ ಸ್ಥಾನ?

Spread the love

Leave a Reply

Your email address will not be published. Required fields are marked *