ಭಾರತದಲ್ಲಿ ಒಂದೇ ದಿನ 78,357 ಕೊರೊನಾ ಕೇಸ್ : 1045 ಮಂದಿ ಬಲಿ!

ಭಾರತದಲ್ಲಿ ಕೊರೊನಾ ತನ್ನ ದೈತ್ಯ ಬಾಹುಗಳನ್ನು ಚಾಚಿಕೊಳ್ಳುತ್ತಲೇ ಇದ್ದು ಜನರಲ್ಲಿ ಆತಂಕವನ್ನು ಹೆಚ್ಚಿಸುತ್ತಲೇ ಇದೆ. ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 78,357 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 37,69,524ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಇದೇ ವೇಳೆ ಕೊರೋನಾ ವೈರಸ್ ಕಳೆದ 24 ಗಂಟೆಗಳಲ್ಲಿ 1045 ಮಂದಿಯನ್ನು ಬಲಿಪಡೆದುಕೊಂಡಿದ್ದು, ಇದರೊಂದಿಗೆ ಈ ವರೆಗೂ ಮಹಾಮಾರಿ ವೈರಸ್’ಗೆ 66,333 ಮಂದಿ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು 37,69,524 ಮಂದಿ ಸೋಂಕಿತರ ಪೈಕಿ 29,019,09 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 8,01,282 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ 15,765 ಹೊಸ ಪ್ರಕಱಣಗಳು ದಾಖಲಾಗುವುದರೊಂದಿಗೆ ಸೋಂಕಿತರ ಸಂಖ್ಯೆ 8 ಲಕ್ಷ ಗಡಿದಾಟಿದೆ. ದೆಹಲಿಯಲ್ಲಿ 2 ತಿಂಗಳ ಬಳಿಕ ಕೊರೋನಾ ವೈರಸ್ ಪ್ರಕರಣಗಳು ಮತ್ತೊಮ್ಮೆ ಹೆಚ್ಚಳಗೊಂಡಿದ್ದು, 2,312 ಹೊಸ ಪ್ರಕರಣಗಳು ದಾಖಲಾಗಿವೆ.

Spread the love

Leave a Reply

Your email address will not be published. Required fields are marked *