ಬೆಂಗಳೂರಿನಲ್ಲಿ ಭಾರೀ ಮಳೆ : ಮುಂದಿನ 4 ದಿನಗಳಕಾಲ ಮಲೆನಾಡು ಭಾಗದಲ್ಲಿ ಆರೆಂಜ್​ ಅಲರ್ಟ್​!

ಕಳೆದೆರೆಡು ತಿಳಗಳುಗಳಿಂದ ಕೊಂಚ ತಗ್ಗಿದ್ದ ಮಳೆ ಮತ್ತೆ ಜೋರಾಗಿ ಶುರುವಾಗಿದೆ. ಹೀಗಾಗಿ ನಿನ್ನೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಕೆಲ ಭಾಗಗಳಲ್ಲಿ ಅಧಿಕ ಮಳೆಯಾಗುತ್ತಿದೆ. ಮುಂದಿನ ನಾಲ್ಕು ದಿನಗಳಕಾಲ ಮಲೆನಾಡು ಭಾಗದಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ. ಈ ಭಾಗದಲ್ಲಿ ಆರೆಂಜ್​ ಅಲರ್ಟ್​ ಘೋಷಣೆ ಮಾಡಿದೆ.

ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರಗೆ ಭಾರೀ ಮಳೆ ನಿರೀಕ್ಷೆ ಇದ್ದು ಆರೆಂಜ್​ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 3 ದಿನ ಹೆಚ್ಚಿನ ಮಳೆ ನಿರೀಕ್ಷೆ ಇದ್ದು ಎಲ್ಲೋ ಅಲರ್ಟ್ ನೀಡಲಾಗಿದೆ. ಈ ಸ್ಥಳಗಳಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಮುಂದಿನ ದಿನಗಳಲ್ಲಿ ಏರಿಕೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 5ರವರಗೆ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲಿ ನಿತ್ಯ ರಾತ್ರಿ ಮಳೆ ಆಗುತ್ತಲೇ ಇದೆ. ಮುಂದಿನ ಎರಡು ದಿನಗಳವರಗೆ ಬೆಂಗಳೂರಿನಲ್ಲೂ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ಹೇಳಿದ್ದಾರೆ.

ನಿನ್ನೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಶಿರಾಡಿ, ಕುಮಟಾ, ಅಂಕೋಲಾ ತಲಾ ಎಂಟು ಸೆಂ.ಮೀ ಮಳೆಯಾಗಿದ್ದು, ಗೋಕರ್ಣ, ಕದರಾದಲ್ಲಿ ತಲಾ ಏಳು ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.
ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights