ಭದ್ರಾವತಿ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶ!

ಭದ್ರಾವತಿಯ ಮಾಜಿ ಶಾಸಕ, 67 ವರ್ಷದ ಎಂ.ಜೆ.ಅಪ್ಪಾಜಿ ಗೌಡ ಅವರು ಕೊರೊನಾದಿಂದ ಶಿವಮೊಗ್ಗದ ಜಿಲ್ಲಾ ಮೆಕ್‌ಗ್ಯಾನ್ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾಗಿದ್ದಾರೆ.

ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ಸೋಂಕು ದೃಢಪಟ್ಟ ನಂತರ ಅವರನ್ನು ಮೆಕ್‌ಗ್ಯಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಭದ್ರಾವತಿಯ ವಿಶ್ವೇಶ್ವರಯ್ಯ ಐರನ್ ಮತ್ತು ಸ್ಟೀಲ್ ಪ್ಲಾಂಟ್‌ನಲ್ಲಿ ಉದ್ಯೋಗಿಯಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದ ಅವರು, ಕಾರ್ಮಿಕ ಸಂಘದ ನಾಯಕರಾಗಿ ಬೆಳೆದು, ನಂತರ ರಾಜಕೀಯಕ್ಕೆ ಕಾಲಿಟ್ಟರು.

ಅವರು 1994 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದರು. ಅವರು 1999 ರಲ್ಲಿ ಕಾಂಗ್ರೆಸ್ ನ ಪ್ರತಿಸ್ಪರ್ಧಿ ಬಿ.ಕೆ.ಸಂಗಮೇಶ್ ವಿರುದ್ಧ ಜಯ ದಾಖಲಿಸಿದ್ದರು. ಆದಾಗ್ಯೂ, ಅವರನ್ನು ಸಂಗಮೇಶ್ ಎರಡು ಬಾರಿ ಸೋಲಿಸಿದರು.

ನಂತರ, ಅವರು ಜೆಡಿ(ಎಸ್)ಗೆ ಸೇರಿ ಮತ್ತು 2013 ರಲ್ಲಿ ಮತ್ತೆ ಗೆದ್ದಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಹಾಯಕ ಸಿ ಎಂ ಇಬ್ರಾಹಿಂ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದಾಗ ಅಪ್ಪಾಜಿ ಗೌಡ 2013 ರಲ್ಲಿ ಗಮನಾರ್ಹ ಜಯ ದಾಖಲಿಸಿದ್ದರು. ಸಂಗಮೇಶ್ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯನ್ನು ಎದುರಿಸಿದ್ದರು.

ಸಂಗಮೇಶ್ ಅವರು 2018 ರಲ್ಲಿ ಮತ್ತೆ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಅಪ್ಪಾಜಿಗೌಡರನ್ನು ಸೋಲಿಸಿದ್ದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿ, “ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಎಂ.ಜೆ. ಅಪ್ಪಾಜಿ (ಅಪ್ಪಾಜಿ ಗೌಡ್ರು) ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀರಾ ದು:ಖವಾಯಿತು. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಉಕ್ಕಿನ ನಗರಿ ಭದ್ರಾವತಿಯ ಕಾರ್ಖಾನೆ ಕಾರ್ಮಿಕರ ಧ್ವನಿಯಾಗಿ ರಾಜಕೀಯ ಪ್ರವೇಶಿಸಿದ ಅಪ್ಪಾಜಿ ಗೌಡರ ನಿಧನ ಈ ನಾಡಿಗೆ ಮತ್ತು ಜೆಡಿಎಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಸಂತಾಪ ಸೂಚಿಸಿದ್ದಾರೆ.


Read Also: ‘ಕೇಜ್ರಿವಾಲ್ ಮೋಸ ಮಾಡಿದ್ದಾರೆ’ : ಆಮ್ ಆದ್ಮಿ ಪಕ್ಷವನ್ನು ವಿರೋಧಿಸಿದ ಅಣ್ಣಾ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights