ಅಕ್ರಮ ಮರಳು ಸಾಗಾಣಿಕೆಗೆ ಅವಕಾಶ: ಚಾಮರಾಜನಗರ ಡಿವೈಎಸ್‌ಪಿ ಮೋಹನ್ ಅಮಾನತು

ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆಗೆ ಅನುವುಮಾಡಿಕೊಟ್ಟಿದ್ದ ಮತ್ತು  ಮರಳು ಲಾರಿಯೊಂದು ಅಪಘಾತವೆಸಗಿದ್ದ ಪ್ರಕರಣವನ್ನು ತಿರುಚಿದ್ದು,  ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ಚಾಮರಾಜನಗರದ ಡಿವೈಎಸ್‌ಪಿ ಜೆ. ಮೋಹನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಡಿವೈಎಸ್‌ಪಿ ಜೆ ಮೋಹನ್ ಅವರನ್ನು ಕೆ.ಎಸ್.ಪಿ (ಡಿಪಿ) ನಿಯಮಗಳ 1965/89ರ ನಿಯಮ 5ರ ಅನ್ವಯ ಅಮಾನತುಪಡಿಸಿ ಸರ್ಕಾರದ ಒಳಾಡಳಿತ ಇಲಾಖೆಯ (ಪೊಲೀಸ್ ಸೇವೆಗಳು) ಅಧೀನ ಕಾರ್ಯದರ್ಶಿ ಬಿ.ಕೆ  ಭುವನೇಂದ್ರ ಕುಮಾರ್  ಆದೇಶ ಹೊರಡಿಸಿದ್ದಾರೆ.

ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್​ ಲಾರಿಯೊಂದು ಮೇ 15 ರಂದು ಚಾಮರಾಜನಗರ ತಾಲೋಕಿನ ಮಾದಾಪುರದ ಬಳಿ ನಿಂತಿತ್ತು. ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್ಸ್​ಪೆಕ್ಟರ್​​ ಮಂಜು ಅವರು ಲಾರಿಯಿದ್ದ ಸ್ಥಳಕ್ಕೆ ತೆರಳಿದ ಸಂದರ್ಭದಲ್ಲಿ ಟಿಪ್ಪರ್​​ ಚಾಲಕ  ತಪ್ಪಿಸಿಕೊಳ್ಳಲು ಯತ್ನಿಸಿದಾಗ ಎದುರಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ. ಈ ಪ್ರಕರಣದಿಂದಾಗಿ ಅಕ್ರಮ ಮರಳು ಸಾಗಾಣಿಕೆ ವಿಚಾರ ಮೇಲಾಧಿಕಾರಿಗಳಿಗೆ ತಿಳಿದರೆ ತಮಗೆ ತೊಂದರೆಯಾಗುತ್ತದೆ ಎಂದು ಟಿಪ್ಪರ್​​ನಲ್ಲಿದ್ದ ಮರಳನ್ನು ರಸ್ತೆ ಬದಿ ಸುರಿದು ಎಂ ಸ್ಯಾಂಡ್ ಸಾಗಾಣಿಕೆಯಾಗುತ್ತಿತ್ತು ಎಂದು  ಬಿಂಬಿಸಲಾಗಿದೆ  ಎಂಬ ಆರೋಪ ಪೊಲೀಸರ ಮೇಲೆ ಕೇಳಿ ಬಂದಿತ್ತು.

ಪೊಲೀಸರು ಯಾರಿಗೋ ಸಹಾಯ ಮಾಡಲು  ತನಿಖೆಯನ್ನು ಸರಿಯಾಗಿ ಮಾಡದೆ ಕರ್ತವ್ಯ ಲೋಪ ಎಸಗಿದ್ದರು ಎಂಬ ಬಗ್ಗೆ ಸ್ಥಳೀಯರು ನೀಡಿದ್ದರು. ಈ ಆರೋಪದ ಮೇರೆಗೆ ಈಗಾಗಲೇ ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್ಸ್​ಪೆಕ್ಟರ್​​​​ ಕೆ.ಎಂ ಮಂಜು, ಪೂರ್ವ ಪೊಲೀಸ್ ಠಾಣೆ ಸಬ್​​ ಇನ್ಸ್​​ಪೆಕ್ಟರ್ ಎಸ್.ಪಿ ಸುನೀಲ್ ಹಾಗೂ ಹೆಡ್ ಕಾನ್ಸ್​ಟೇಬಲ್  ನಾಗ ನಾಯಕ ಎಂಬುವರನ್ನು ಅಮಾನತು ಮಾಡಲಾಗಿದೆ.

ಈ ಎಲ್ಲರೂ ಹಾಗೂ ಡಿವೈಎಸ್ಪಿ ಜೆ.ಮೋಹನ್ ಅಕ್ರಮ ಮರಳು ಸಾಗಾಣಿಕೆದಾರರೊಂದಿಗೆ ಕೈ ಜೋಡಿಸಿದ್ದಾರೆ. ಜೊತೆಗೆ ತಮ್ಮ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆಗೆ ಅನುವು ಮಾಡಿಕೊಟ್ಟು, ಮರಳು ಟಿಪ್ಪರ್ ಲಾರಿ ಅಫಘಾತವಾದರೂ ತಮಗೆ ಸಮಸ್ಯೆಯಾಗಲಿದೆ ಎಂದು ಪ್ರಕರಣ ತಿರುಚಲು ಪ್ರಯತ್ನಿಸಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾಹದ್ದಣ್ಣನವರ್ ಮೇ 25 ರಂದು ಸಲ್ಲಿಸಿದ್ಡರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ  ಜೆ ಮೋಹನ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.


Read Also:  GST ಪಾಲನ್ನು ಕೇಂದ್ರವೇ ಕೊಡಬೇಕು ಎಂದ ಮಮತಾ ಬ್ಯಾನರ್ಜಿ; ನಾವೇ ಸಾಲ ಪಡೆಯುತ್ತೇವೆ ಎಂದ ಬಿಎಸ್‌ವೈ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights