ಕೊರೊನಾ ರೋಗಿಯನ್ನೂ ಬಿಡದ ಕಾಮುಕ; ಆಂಬ್ಯುಲೆನ್ಸ್‌ನಲ್ಲಿ ಅತ್ಯಾಚಾರ: ಚಾಲಕನ ಬಂಧನ

ಕೊರೊನಾ ರೋಗಿಯ ಮೇಲೆ ಆಂಬ್ಯುಲೆನ್ಸ್ ಚಾಲಕ ಅತ್ಯಾಚಾರ ಎಸಗಿರುವ ಘಟನೆ ಕೇರಳದ ಪತನಂತಿಟ್ಟಾ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ನಡೆಸಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆಂಬುಲೆನ್ಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಒಂದೇ ಕುಟುಂಬದ ಇಬ್ಬರು ಮಹಿಳೆಯರಿಗೆ ಕೊರೊನಾ ದೃಢಪಟ್ಟಿತ್ತು. ಕೇರಳದಲ್ಲಿ ಕೊರೊನಾ ನಿಯಮಗಳ ಪ್ರಕಾರ, ರೋಗಿಗಳನ್ನು ಆಂಬುಲೆನ್ಸ್ ಮೂಲಕ ಮಾತ್ರ ಆಸ್ಪತ್ರೆಗೆ ಸಾಗಿಸಲು ಅವಕಾಶವಿದೆ. ಶನಿವಾರ ಮಧ್ಯರಾತ್ರಿಯ ಹೊತ್ತಿಗೆ ಆಂಬ್ಯುಲೆನ್ಸ್ ಬಂದಿದ್ದು, ರೋಗಿಯನ್ನು ಸ್ಥಳೀಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೌಲಭ್ಯ ಕೇಂದ್ರದ ಅಧಿಕಾರಿಗಳು ಒಬ್ಬ ರೋಗಿಯನ್ನು ಮಾತ್ರ ದಾಖಲಿಸಿಕೊಂಡಿದ್ದು, ಮತ್ತೊಬ್ಬ ರೋಗಿಯನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಚಾಲಕರಿಗೆ ಸೂಚಿಸಿದರು. ಆಗ ಈ ದುರ್ಘಟನೆ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಚಾಲಕನು ಆಂಬುಲೆನ್ಸ್ ಅನ್ನು ನಿರ್ಜನ ಸ್ಥಳದಲ್ಲಿ ನಿಲ್ಲಿಸಿ ವಾಹನದೊಳಗಿನ ರೋಗಿಯ ಮೇಲೆ ಅತ್ಯಾಚಾರ ಎಸಗಿದ್ದು, ಇದನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ರೋಗಿಗೆ ಬೆದರಿಕೆ ಹಾಕಿದ್ದಾನೆ. ಆದರೆ ಆಸ್ಪತ್ರೆಗೆ ದಾಖಲಾದ ನಂತರ ಈ ಘಟನೆಯ ಬಗ್ಗೆ ಆಕೆ ವೈದ್ಯರಿಗೆ ತಿಳಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಪ್ರತಿದಿನ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ; 16 ನಿಮಿಷಕ್ಕೊಂದು ದೌರ್ಜನ್ಯ!

ವೈದ್ಯಕೀಯ ಪರೀಕ್ಷೆಯ ನಂತರ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಅತ್ಯಾಚಾರ, ಕೊಲೆ ಯತ್ನ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

“ಇದು ಆಘಾತಕಾರಿ ಘಟನೆ. ಇಂತಹ ಘಟನೆಗಳು ನಡೆಯದಂತೆ ಸಚಿವಾಲಯ ಕ್ರಮ ಕೈಗೊಂಡಿದೆ. ಇಂದಿನಿಂದ ಹೆಚ್ಚಿನ ಆರೋಗ್ಯ ಕಾರ್ಯಕರ್ತರನ್ನು ಆಂಬುಲೆನ್ಸ್‌ಗಳಲ್ಲಿ ನಿಯೋಜಿಸಲಾಗುವುದು” ಎಂದು ಕೇರಳ ಶಾಸಕಾಂಗ ಸಭೆಯಲ್ಲಿ ಅರ್ನಮುಲಾ ಕ್ಷೇತ್ರವನ್ನು ಪ್ರತಿನಿಧಿಸುವ ಮತ್ತು ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಮಾರ್ಕ್ಸ್‌ವಾದಿ) ನಾಯಕಿ ವೀಣಾ ಜಾರ್ಜ್ ಹೇಳಿದ್ದಾರೆ.


ಇದನ್ನೂ ಓದಿ: ಬಾಲಕಿಯ ಮೇಲೆ ಪೊಲೀಸರಿಂದಲೇ ಅತ್ಯಾಚಾರ; 08 ಜನರ ಮೇಲೆ ಎಫ್‌ಐಆರ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights