ದೇಶದಲ್ಲಿ ಒಂದೇ ದಿನ 90,000ಕ್ಕೂ ಹೆಚ್ಚು ಹೊಸ ಕೊರೊನಾ ಪ್ರಕರಣ; ವಿಶ್ವದಲ್ಲಿ ಭಾರತಕ್ಕೆ 2ನೇ ಸ್ಥಾನ

ಭಾರತದಲ್ಲಿ ಕೊರೊನಾ ಹಾವಳಿ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಇತ್ತೀಚೆಗಿನ ಬೆಳವಣಿಗೆಗಳನ್ನು ನೋಡಿದರೆ ಸರ್ಕಾರಗಳೂ ಕೊರೊನಾ ಬಗ್ಗೆ ಹೆಚ್ಚಿನ ಗಮನ ಕೊಡುವುದನ್ನು ಬಿಟ್ಟು, ನಿರಾಳವಾಗಿರುವಂತೆ ಕಾಣುತ್ತಿದೆ. ಸದ್ಯ ಭಾರತದಲ್ಲಿ ನಿನ್ನೆ ಒಂದೇ ದಿನ  90,633 ಹೊಸ ಸೋಂಕಿತ ಪ್ರಕರಣಗಳು ದಾಖಲಾಗಿವೆ.

ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರಮಾಣದಲ್ಲಿ ಸೋಂಕಿತರ ಪ್ರಕರಣಗಳು ದಾಖಲಾಗಿದ್ದು, ವಿಶ್ವದಲ್ಲಿನ ಸೋಂಕಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನಕ್ಕೇರಿದೆ. ವಿಶ್ವದ ದೊಡ್ಡಣ ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ದೊಡ್ಡ ಸಂಖ್ಯೆಯನ್ನೇ ಹೊಂದಿದ್ದು, ಅಮೆರಿಕಾ ಸೋಂಕಿತ ರಾಷ್ಟ್ರಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ದೇಶದಲ್ಲಿ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 70 ಸಾವಿರವನ್ನು ದಾಟಿದ್ದು, ಕಳೆದ 10 ದಿನಗಳಲ್ಲಿ 10 ಸಾವಿರ ಸಾವು ಸಂಭವಿಸಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 41 ಲಕ್ಷ ದಾಟಿದ್ದು, ಈ ಮೊದಲು ಎರಡನೇ ಸ್ಥಾನದಲ್ಲಿದ್ದ ಬ್ರೆಝಿಲ್ 40,93,586 ಪ್ರಕರಣಗಳೊಂದಿಗೆ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ ಎಂದು ಹೇಳಲಾಗಿದೆ.

ದೇಶದ ಒಟ್ಟು ಪ್ರಕರಣಗಳ ಪೈಕಿ ಶೇಕಡ 46ರಷ್ಟು ಹಾಗೂ ಒಟ್ಟು ಸಾವಿನ ಪೈಕಿ ಶೇಕಡ 52ರಷ್ಟು ಪಾಲು ಹೊಂದಿರುವ ಮಹಾರಾಷ್ಟ್ರ, ಆಂಧ್ರ ಪ್ರದೇಶ ಹಾಗೂ ಕರ್ನಾಟಕ, ಸಾಂಕ್ರಾಮಿಕ ಹರಡುವಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ರಾಜ್ಯದಲ್ಲಿ 1,727 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,45,860ಕ್ಕೇರಿದೆ.

ವಿಶ್ವಾದ್ಯಂತ 26.75 ದಶಲಕ್ಷ ಮಂದಿಗೆ ಸೋಂಕು ತಗಲಿದ್ದು, 8,75,419 ಮಂದಿ ಮೃತಪಟ್ಟಿದ್ದಾರೆ.


ಇದನ್ನೂ ಓದಿ: ದೇವರ ಆಟ ಗೊತ್ತಿಲ್ಲ; ದೆವ್ವಗಳು ದೇಶ ಆಳುತ್ತಿವೆ: ದೇವನೂರು ಮಹಾದೇವ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights