ಬಾಲಕಿಯ ಮೇಲೆ ಪೊಲೀಸರಿಂದಲೇ ಅತ್ಯಾಚಾರ; 08 ಜನರ ಮೇಲೆ ಎಫ್‌ಐಆರ್‌

18 ವರ್ಷದ ಬಾಲಕಿಯ ಮೇಲೆ ಪೊಲೀಸರು ಮತ್ತು ಪತ್ರಕರ್ತರು ಸೇರಿದಂತೆ 8 ಜನರು ಸಾಮೂಹಿಕ ಅತ್ಯಾಚಾರ ನಡೆಸಿರುವ ಭಯಾನಕ ಘಟನೆ ಒಡಿಶಾದಲ್ಲಿ ನಡೆದಿದೆ.

ನ್ಯೂಸ್‌ ಚಾನೆಲ್‌ನಲ್ಲಿ ಕೆಲಸ ಮಾಡುವ ಇಬ್ಬರು ಹಾಗೂ ಮೂವರು ಪೊಲೀಸರು ಸೇರಿದಂತೆ ಎಂಟು ಮಂದಿ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದಾಗಿ ಬಾಲಕಿಯ ತಾಯಿ ದೂರು ನೀಡಿದ್ದು, ಮೂವರು ಪೊಲೀಸರು, ನ್ಯೂಸ್​ ಚಾನೆಲ್​ನ ಇಬ್ಬರು ವ್ಯಕ್ತಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ. 8 ಮಂದಿಯ ಮೇಲೆ ಎಫ್​ಐಆರ್ ದಾಖಲಿಸಲಾಗಿದೆ.

ತಮ್ಮ ಮಗಳ ಮೇಲೆ ನಡೆದ ಅಮಾನವೀಯ ಲೈಂಗಿಕ ದೌರ್ಜನ್ಯದ ಬಗ್ಗೆ ಒಡಿಶಾದ ರಾಜಧಾನಿ ಭುವನೇಶ್ವರದ ಮಹಿಳಾ ಪೊಲೀಸ್ ಠಾಣೆಯಲ್ಲಿ  ದೂರು ನೀಡಿದ್ದಾರೆ. ಮಾರ್ಚ್​ ಮತ್ತು ಏಪ್ರಿಲ್ ಸಮಯದಲ್ಲಿ ನನ್ನ ಮಗಳ ಮೇಲೆ 8 ಮಂದಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದರು. ಎಲೆಕ್ಟ್ರಾನಿಕ್ ಮಾಧ್ಯಮದ ಇಬ್ಬರು ಪತ್ರಕರ್ತರು, ಇಬ್ಬರು ಪೊಲೀಸರು ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಆರೋಪಿಸಿ ಆಗಸ್ಟ್​ 30ರಂದು ದೂರು ನೀಡಿದ್ದಾರೆ.

ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರ ಬಳಿ ಬಾಲಕಿ ಅಂದು ನಡೆದ ವಿಚಾರವನ್ನು ಹೇಳಿಕೊಂಡಿದ್ದಾರೆ. ಕೊರೊನಾ ಡ್ಯೂಟಿಗೆ ನೇಮಕವಾಗಿದ್ದ ಪೊಲೀಸ್ ಕೂಡ ಅತ್ಯಾಚಾರ ನಡೆಸಿರುವುದಾಗಿ ಬಾಲಕಿ ಹೇಳಿಕೆ ನೀಡಿದ್ದಳು. ಆದರೆ, ಅದು ಸುಳ್ಳು ಆರೋಪ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

7 ಜನರ ಜೊತೆ ಸೇರಿ ಬಾಲಕಿಯನ್ನು ಕಿಡ್ನಾಪ್ ಮಾಡಿದ್ದ ಪೊಲೀಸರು ಅತ್ಯಾಚಾರ ನಡೆಸಿದ್ದರು. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದರು. ಮನೆಯಲ್ಲಿ ಎಲ್ಲರೂ ಏನಾಯಿತು ಎಂದು ಹೇಳುವಂತೆ ಒತ್ತಾಯಿಸಿದಾಗ ಆಕೆ ಅಪ್ಪನ ಬಳಿ ನಡೆದ ವಿಷಯವನ್ನು ಹೇಳಿದ್ದಳು. ಬಾಲಕಿಯ ಮೇಲಿನ ಅತ್ಯಾಚಾರ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆಕೆಯ ತಾಯಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.


ಇದನ್ನೂ ಓದಿ: ಕೊರೊನಾ ಕಾಲದಲ್ಲಿ ಶಿಕ್ಷಣದಿಂದ ದೂರ ಉಳಿದ ಮಕ್ಕಳ ಸಮೀಕ್ಷೆ ಮಾಡಿ: ಡಿಕೆಶಿ ಒತ್ತಾಯ

Spread the love

Leave a Reply

Your email address will not be published. Required fields are marked *