ಅತ್ಯಾಚಾರ ಎಸಗಿ ವಿಡಿಯೋ ಹರಿಬಿಟ್ಟ ಕಾಮುಕ; ಸಂತ್ರಸ್ಥೆ ಆತ್ಮಹತ್ಯೆ

ಕಾಮುಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಅತ್ಯಾಚಾರದ ದೃಶ್ಯಗಳನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಮನನೊಂದ ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಶಹರಾನಪುರದಲ್ಲಿ ನಡೆದಿದೆ.

17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ನೋಮನ್, ಅತ್ಯಾಚಾರದ ಸಂದರ್ಭವನ್ನು ಆತನ ಚಾಲಕ ರಹ್ಬರ್ ನಿಂದ ವಿಡಿಯೋ ಮಾಡಿಸಿದ್ದ. ವಿಡಿಯೋವನ್ನು ಆಕೆಗೆ ತೋರಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಅಲ್ಲದೆ ತಾವು ಹೇಳಿದಂತೆ ಕೇಳಬೇಕು ಎಂದು ಬೆದರಿಸಿದ್ದರು. ಅವರ ಮಾತನ್ನು ಕೇಳದ ಬಾಲಕಿಯ ಮೇಲೆ ಸಿಟ್ಟಾದ ಕಾಮುಕರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಪ್‌ ಮಾಡಿದ್ದಾರೆ.

ಅತ್ಯಾಚಾರಕ್ಕೆ ಒಳಗಾಗಿ ಮನನೊಂದಿದ್ದ ಯುವತಿ, ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ ಎಂಬುದನ್ನು ತಿಳಿದಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.  ತೀವ್ರ ಅಸ್ವಸ್ಥಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಪ್ರಕಟಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376(ಅತ್ಯಾಚಾರ), 306(ಅತ್ಯಾಚಾರಕ್ಕೆ ಪ್ರೇರಣೆ) ಸೇರಿದಂತೆ ಐಟಿ ಕಾಯ್ದೆಯಡಿ ಶಹರಾನಪುರ ಪೊಲೀಸರು ದೂರು ದಾಖಲಿಸಿದ್ದಾರೆ.


ಇದನ್ನೂ ಓದಿ: ಡ್ರಗ್ಸ್‌ ಮಾಫಿಯಾದಲ್ಲಿ ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರ; ಆದಿತ್ಯ ಆಳ್ವ ಬಂಧನಕ್ಕೆ ವಿಶೇಷ ತಂಡ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights