ರಾಜ್ಯದಲ್ಲಿ ಮುಂದುವರೆದ ಕೊರೊನಾ ಹಾವಳಿ : ಒಂದೇ ದಿನ 9540 ಹೊಸ ಕೇಸ್!

ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು ದಿನೇ ದಿನೇ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಕಳೆದ 24 ಗಂಟೆಯಲ್ಲಿ 9540 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಈವರೆಗೆ ಸೋಂಕಿತರ ಸಂಖ್ಯೆ 4,21,730ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಒಂದೇ ದಿನ 128 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಬೆಂಗಳೂರು ನಗರವೊಂದರಲ್ಲೇ  3419 ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,57,044ಕ್ಕೆ ಏರಿಕೆಯಾಗಿದೆ.

ಇಂದು 6860 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,15,433ಕ್ಕೆ ಏರಿಕೆಯಾಗಿದೆ. 99,470 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 776 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Spread the love

Leave a Reply

Your email address will not be published. Required fields are marked *