ಮಂಗಳೂರು ಸಿಎಎ ವಿರೋಧಿ ಪ್ರತಿಭಟನೆ: 21 ಆರೋಪಿಗಳಿಗೆ ಜಾಮೀನು ನೀಡಿದ ಸುಪ್ರೀಂ

 ಸಿಎಎ, ಎನ್ ಆರ್ ಸಿ ಮತ್ತು ಎನ್ ಪಿಆರ್ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಮತ್ತು ಗೋಲಿಬಾರ್‌ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 21 ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ.

ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ 2019ರ ಡಿಸೆಂಬರ್‌ 19 ರಂದು ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಗೋಲಿಬಾರ್‌ ನಡೆಸಲಾಗಿತ್ತು, ಇದರಿಂದಾಗಿ ಇಬ್ಬರು ಸಾವನ್ನಪ್ಪಿದ್ದರು. ಅಲ್ಲದೆ, ಪೊಲೀಸರು 21 ಜನರನ್ನು ಬಂಧಿಸಿದ್ದರು. ಬಂಧನಕ್ಕೊಳಗಾಗಿದ್ದ ಎಲ್ಲಾ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡಿತ್ತು.

ಹೈಕೋರ್ಟ್‌ ನೀಡದ ಜಾಮೀನು ಪ್ರಶ್ನಿಸಿ, ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು  ವಿ ರಾಮಸುಬ್ರಮಣಿಯನ್ ಅವರ ತ್ರಿಸದಸ್ಯ ಪೀಠ, ಆರೋಪಿಗಳಿಗೆ ಜಾಮೀನು ನೀಡಿದ್ದು, ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಎತ್ತಿಹಿಡಿದಿದೆ.

ಪ್ರತಿಯೊಬ್ಬ ಆರೋಪಿಗೆ 25 ಸಾವಿರ ರೂ.ಗಳ ಜಾಮೀನು ನೀಡುವಂತೆ ಸೂಚಿಸಿದ್ದು, ಪ್ರತಿ ಸೋಮವಾರ ಹತ್ತಿರದ ಪೊಲೀಸ್ ಠಾಣೆಗೆ ವರದಿ ಸಲ್ಲಿಸಬೇಕು ಮತ್ತು ಯಾವುದೇ ಹಿಂಸಾತ್ಮಕ ಚಟುವಟಿಕೆಗಳಲ್ಲಿ / ಸಭೆಗಳಲ್ಲಿ ಭಾಗವಹಿಸಬಾರದು ಎಂದು ಸೂಚನೆ ನೀಡಿದೆ.


ಇದನ್ನೂ ಓದಿ: ಶಹೀನ್ ಭಾಗ್ ಪ್ರತಿಭಟನಕಾರರಿಗೆ ಜಾಮೀನು: ಸಿಎಎ, ಎನ್ ಆರ್ ಸಿ ಬಗ್ಗೆ ಪೋಸ್ಟ್ ಮಾಡುವುದಕ್ಕೆ ನಿರ್ಬಂಧ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights