ಬಿಬಿಎಂಪಿ ಚುನಾವಣೆ ವಿಳಂಬ: ತುರ್ತು ವಿಚಾರಣೆಗಾಗಿ ಹೈಕೋರ್ಟ್‌ನಲ್ಲಿ ಕಾಂಗ್ರೆಸ್‌ ಪಿಐಎಲ್‌

ಬಿಬಿಎಂಪಿಗೆ ಸರ್ಕಾರ ಹೊಸದಾಗಿ ಆಡಳಿತಾಧಿಕಾರಿಯನ್ನು ನೇಮಕ ಮಾಡಿದ್ದು, ಚುನಾವಣೆಯನ್ನು ಮುಂದೂಡುವ ಸಂಚು ನಡೆಯುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌, ಬಿಬಿಎಂಪಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸಬೇಕೆಂದು ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಿದೆ.

ರಾಜ್ಯ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ಮುಂದೂಡುವ ತಂತ್ರಗಾರಿಕೆಗೆ ಮುಂದಾಗಿದೆ. ಹಾಗಾಗಿಯೇ ಬಿಬಿಎಂಪಿ ಆಡಳಿತ ಕೊನೆಗೊಳ್ಳುವ ಮುನ್ನವೇ ಬಿಬಿಎಂಪಿಯನ್ನು ವಿಸರ್ಜಿಸದೆ ಏಕಾಏಕಿ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ತುರ್ತು ವಿಚಾರಣೆ ನಡೆಸವಬೇಕು ಎಂದು ಕೋರಿ  ಬಿಬಿಎಂಪಿ ಮಾಜಿ ಸದಸ್ಯರಾದ ಕಾಂಗ್ರೆಸ್‌ನ ಎಂ.ಶಿವರಾಜ್, ಅಬ್ದುಲ್ ವಾಜೀದ್ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಸೆ.10ಕ್ಕೆ ಬಿಬಿಎಂಪಿ ಆಡಳಿತ ರ್ಪೂಗೊಂಡಿದೆ. ಇದಕ್ಕೂ ಮುನ್ನವೇ ಚುನಾವಣೆ ನಡೆಸಿ ಹೊಸ ಸಮಿತಿ ಅಸ್ತಿತ್ವಕ್ಕೆ ಬರಬೇಕಿತ್ತು. ಚುನಾವಣೆ ನಡೆಸದೇ ಅಧಿಕಾರಾವಧಿಯ ಕೊನೆಯ ದಿನದಲ್ಲಿ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿರುವುದು ಕೆಎಂಸಿ ಕಾಯ್ದೆಗೆ ವಿರುದ್ದವಾಗಿದೆ ಎಂದು ಕಾಂಗ್ರೆಸ್‌ ಮುಖಂಡರು ಆರೋಪಿಸಿದ್ದಾರೆ.

ಕೊರೊನಾ ಸಮಯದಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸಲು ಜನಪ್ರತಿನಿಧಿಗಳ ಆಡಳಿತವಿರಬೇಕು. ಆದರೆ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಕ ಮಾಡಿದೆ. ಹಾಗಾಗಿ ನ್ಯಾಯಾಲಯವು ಚುನಾವಣೆ ನಡೆಸುವ ಬಗ್ಗೆ ತುರ್ತು ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ಅರ್ಜಿದಾರರ ಪರ  ವಕೀಲ ರವಿವರ್ಮ ಕುಮಾರ್ ಅವರು ಅರ್ಜಿಯಲ್ಲಿ ಹೇಳಿದ್ದಾರೆ.

ಬೆಂಗಳೂರಿಗೆ ಪ್ರತ್ಯೇಕ ಕಾಯ್ದೆ ರೂಪಿಸಲು ಸಿದ್ದತೆ ನಡೆಸಿರುವ ಸರ್ಕಾರ, ಇನ್ನೂ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಉದ್ದೇಶ ಪೂರ್ವಕವಾಗಿ ವಿಳಂಬ ಮಾಡುತ್ತಿದೆ ಎಂದು ಆರೋಪಿಸಲಾಗಿದೆ.

ಒಂದು ವೇಳೆ ಸಮಯ ಅವಕಾಶ ಸಿಕ್ಕರೆ ಪ್ರತ್ಯೇಕ ಕಾಯ್ದೆ ರೂಪಿಸಿ ವಾರ್ಡ್‍ಗಳ ಸಂಖ್ಯೆ ಹೆಚ್ಚಿಸಿ ಆರು ತಿಂಗಳು ಅಥವಾ ವರ್ಷದ ನಂತರ ಚುನಾವಣೆ ನಡೆಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಕಾಂಗ್ರೆಸ್‌ ಮುಖಂಡರು ದೂರಿದ್ದಾರೆ.


ಇದನ್ನೂ ಓದಿ: ಮಕ್ಕಳ ಪ್ರಕೃತಿ ಶಿಕ್ಷಣ ಶಿಬಿರವನ್ನು ವಾಣಿಜ್ಯಕ್ಕಾಗಿ ವಶಪಡಿಸಿಕೊಂಡ ರೆಸಾರ್ಟ್‌ ಸಂಸ್ಥೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights