ಮಕ್ಕಳ ಪ್ರಕೃತಿ ಶಿಕ್ಷಣ ಶಿಬಿರವನ್ನು ವಾಣಿಜ್ಯಕ್ಕಾಗಿ ವಶಪಡಿಸಿಕೊಂಡ ರೆಸಾರ್ಟ್‌ ಸಂಸ್ಥೆ!

ಶಾಲಾ ಮಕ್ಕಳಿಗೆ ಪ್ರಾಯೋಗಿಕವಾಗಿ ಪ್ರಕೃತಿ ಶಿಕ್ಷಣ ನೀಡುವುದಕ್ಕಾಗಿ ಮಲೆ ಮಹದೇಶ್ವರ ಬೆಟ್ಟದ ಗೋಪಿನಾಥಂ ಎಂಬಲ್ಲಿ ನಿರ್ಮಿಸಲಾಗಿದ್ದ ಶಿಬಿರವನ್ನು ಪ್ರವಾಸೋದ್ಯಮದ ಉದ್ದೇಶಕ್ಕಾಗಿ ಜಂಗಲ್‌ ಲಾಡ್ಜಸ್‌ ರೆಸಾರ್ಟ್‌ಗೆ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇದು ಕಾವೇರಿ ವನ್ಯಜೀವಿ ಧಾಮದ ಪರಿಸ್ರ ಸೂಕ್ಷ್ಮ ವಲಯದ ಅಧಿಸೂಚನೆಯ ಉಲ್ಲಂಘನೆಯಾಗಿದೆ ಎಂದು ಹೇಳಲಾಗಿದೆ.

ಶಾಲಾ ಮಕ್ಕಳಿಗೆ ಪ್ರಕೃತಿ ಮತ್ತು ವನ್ಯಜೀವಿ ಸಂರಕ್ಷಣಾ ಶಿಕ್ಷಣನವನ್ನು ನೀಡುವ ಉದ್ದೇಶದಿಂದಾಗಿ ರಾಜ್ಯ ಸರ್ಕಾರ 2015-16ನೇ ಸಾಲಿನಲ್ಲಿ ‘ಚಿಣ್ಣರ ವನದರ್ಶನ’ ಹೆಸರಿನಲ್ಲಿ ಪ್ರಕೃತಿ ಶಿಬಿರಗಳನ್ನು ಆರಂಭಿಸಲು ಆದೇಶ (ಸಂ. ಅಪಜೀ88 ಎಫ್‌ಎಪಿ 2015 ದಿನಾಂಕ 15-07-2015) ಹೊರಡಿಸಿತ್ತು. ಇದರನ್ವಯ ರಾಜ್ಯದ ವಿವಿಧೆಡೆ ಪ್ರಕೃತಿ ಶಿಬಿರಗಳನ್ನು ನಿರ್ಮಿಸಲಾಗಿದ್ದು, ಮೂಕಾಂಬಿಕಾ ವನ್ಯಜೀವಿಧಾಮದ ಅನೆಝರಿ, ಸೋಮೇಶ್ವರ ವನ್ಯಜೀವಿಧಾಮದ ಸೀತಾನದಿ ಪ್ರಕೃತಿ ಶಿಬಿರ, ಭೀಮಘಡ ವನ್ಯಜೀವಿಧಾಮದ ಪ್ರಕೃತಿ ಶಿಬಿರ, ಕಾವೇರಿ ವನ್ಯಜೀವಿಧಾಮದ ಗೋಪಿನಾಥಂ, ಶೆಟ್ಟಿಹಳ್ಳಿ ವನ್ಯಜೀವಿಧಾಮದ ಸಕ್ರೆಬೈಲ್ ಮತ್ತಿತರ ಪ್ರಕೃತಿ ಶಿಬಿರಗಳನ್ನು ಗುರುತಿಸಲಾಗಿತ್ತು.

ಇವುಗಳನ್ನು ಯುವ ಪೀಳಿಗೆಗೆ ಶಿಕ್ಷಣ ನೀಡಲು ಅತ್ಯುತ್ತಮವಾಗಿ ಉಪಯೋಗಿಸಿ ಕೊಳ್ಳಬಹುದು ಎಂಬುದು ಪರಿಸರ ತಜ್ಞರ ವಿಶ್ವಾಸವಾಗಿತ್ತು.

Hasiru Holidays - Reviews, Photos & Rates | ebookers.com

ಕಾವೇರಿ ಮತ್ತು ಮಲೈ ಮಹದೇಶ್ವರ ಸುತ್ತಮುತ್ತಲಿನ ಮಕ್ಕಳು ಚಿಣ್ಣರ ವನದರ್ಶನ’ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಗೋಪಿನಾಥಂ ಶಿಬಿರವೊಂದೇ ಅವರಿಗೆ ಅವಕಾಶವಾಗಿತ್ತು. ಆದರೆ, ಪ್ರವಾಸೋದ್ಯಮ ಇಲಾಖೆಯ ಅಧೀನದಲ್ಲಿರುವ ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ (ಜೆಎಲ್‌ಆರ್) ಸಂಸ್ಥೆ ಅಗತ್ಯ ಅನುಮತಿಗಳಿಲ್ಲದೆ ಅಕ್ರಮವಾಗಿ ಈ ಪ್ರಕೃತಿ ಶಿಬಿರವನ್ನು ರೆಸಾರ್ಟ್ ನಿರ್ಮಾಣಕ್ಕಾಗಿ ವಶಪಡಿಸಿಕೊಂಡಿದೆ ಎಂದು ವರದಿ ಯಾಗಿದೆ.

ಅಲ್ಲದೆ, ಪರಿಸರ-ಸೂಕ್ಷ್ಮ ವಲಯ ಅಧಿಸೂಚನೆಯಲ್ಲಿ ನಿಷೇಧಿತ / ನಿಯಂತ್ರಿಸಲಾದ ಚಟುವಟಿಕೆಗಳ ಪಟ್ಟಿಯ 11 ನೇ ಅಂಶದ ಪ್ರಕಾರ, ಸಂರಕ್ಷಿತ ಪ್ರದೇಶದ ಗಡಿಯ ಒಂದು ಕಿಲೋಮೀಟರ್ ಒಳಗೆ ಅಥವಾ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗಾಗಿ ಸಣ್ಣ ತಾತ್ಕಾಲಿಕ ರಚನೆಗಳನ್ನು ಹೊರತುಪಡಿಸಿ ಯಾವುದೇ ಹೊಸ ವಾಣಿಜ್ಯ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳನ್ನು ನಿರ್ಮಿಸುವಂತಿಲ್ಲ ಎಂದು ಹೇಳಲಾಗಿದ್ದು, ಗೋಪಿನಾಥಂ ಶಿಬಿರದಲ್ಲಿ ರೆಸಾರ್ಟ್‌ ನಿರ್ಮಾಣವು ಕಾವೇರಿ ವನ್ಯಜೀವಿಧಾಮದ ಪರಿಸರ ಸೂಕ್ಷ್ಮ ವಲಯ ಅಧಿಸೂಚನೆಯ ಉಲ್ಲಂಘನೆಯಾಗಿದೆ.

ಈಗಾಗಲೇ, ಸೀತಾನದಿ, ಭೀಮಘಡ, ಸಕ್ರೆಬೈಲ್, ಅನೆಝರಿ ಮತ್ತು ಶಿಬಿರಗಳನ್ನುಮತ್ತು ಕುದುರೆಮುಖ ರಾಷ್ಟ್ರೀಯ ಉದ್ಯಾನದಲ್ಲಿರುವ ಭಗವತಿ ಪ್ರಕೃತಿ ಶಿಬಿರವನ್ನು ವಾಣಿಜ್ಯ ಪ್ರವಾಸೋದ್ಯಮ ಘಟಕಗಳಾಗಿ ಪರಿವರ್ತಿಸಲಾಗಿದೆ. ಈಗ ಗೋಪಿನಾಥಂ ಶಿಬಿರ ಮೇಲೆ ಪ್ರವಾಸೋದ್ಯಮ ಇಲಾಖೆಯ ಕಣ್ಣು ಬಿದ್ದಿದೆ.

ವನ್ಯಜೀವಿಧಾಮ ಅಥವಾ ರಾಷ್ಟ್ರೀಯ ಉದ್ಯಾನದೊಳಗೆ ವಾಣಿಜ್ಯ ಚಟುವಟಿಕೆಗಳನ್ನು ನಡೆಸಲು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಮತ್ತು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮತಿ ಪಡೆಯುವ ಅಗತ್ಯವಿದೆ. ಇದಾವುದನ್ನೂ ಮಾಡದೆ ರೆಸಾರ್ಟ್‌ ನಿರ್ಮಾಣಕ್ಕೆ ಯೋಜಿಸಲಾಗಿದೆ.


ಇದನ್ನೂ ಓದಿ: IAS ಜಿಹಾದ್:’ UPSC ಸೇವೆಗಳಲ್ಲಿ ಮುಸ್ಲಿಮರ ಆಕ್ರಮಣ’ ಕಾರ್ಯಕ್ರಮ ಪ್ರಸಾರಕ್ಕೆ ಅವಕಾಶ ನೀಡಿದ ಬಿಜೆಪಿ ಸರ್ಕಾರ  

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights