ಮಂಡ್ಯದಲ್ಲಿ ಮೂವರು ಅರ್ಚಕರ ಹತ್ಯೆ; ದೇವಾಲಯದ ಹಣ ದರೋಡೆ!

ದೇವಾಲಯದಲ್ಲಿ ಮಲಗಿದ್ದ ಮೂವರು ಅರ್ಚಕರನ್ನು ಹತ್ಯೆ ಮಾಡಿ ಹುಂಡಿಯ ಹಣವನ್ನು ದೋಚಿರುವ ಪ್ರಕರಣ ಮಂಡ್ಯದಲ್ಲಿ ನಿನ್ನೆ ರಾತ್ರಿ ನಡೆಸಿದೆ.

ಮಂಡ್ಯ ನಗರದ ಗುತ್ತಲು ರಸ್ತೆಯಲ್ಲಿರುವ ಅರ್ಕೇಶ್ವರ ದೇವಾಲಯದ ಅರ್ಚಕರು ಮತ್ತು ಕಾವಲುಗಾರರಾದ ಗಣೇಶ್, ಪ್ರಕಾಶ್ ಮತ್ತು ಆನಂದ್ ಎಂಬುವವರನ್ನು ಹತ್ಯೆ ಮಾಡಲಾಗಿದೆ.

ಅರ್ಕೇಶ್ವರ ದೇವಾಲಯವು ಮುಜರಾಯಿ ಇಲಾಖೆಗೆ ಸೇರಿದ್ದಾಗಿದ್ದು, ದೇವರ ಪೂಜೆಯ ಉಸ್ತುವಾರಿ ಜೊತೆಗೆ ದೇವಾಲಯದ ಕಾವಲು ಕಾಯಲು ಇಬ್ಬರು ಕಾವಲುಗಾರರು ರಾತ್ರಿ ದೇವಾಲಯದಲ್ಲಿ ಮಲಗಿದ್ದರು. ಈ ವೇಳೆ ಅವರನ್ನು ಹತ್ಯೆ ಮಾಡಿ, ದೇವಾಲಯದ ಹುಂಡಿ ಹಣವನ್ನು ದೋಚಲಾಗಿದೆ.

ಮೂವರು ದೇವಾಲಯದಲ್ಲಿ ಮಲಗಿದ್ದರು, ಮುಖ್ಯದ್ವಾರದ ಬಾಗಿಲನ್ನು ಬಂದ್‌ ಮಾಡಲಾಗಿತ್ತು. ಆದರೆ, ಕಾಂಪೌಂಡ್ ಪಕ್ಕದಲ್ಲಿರುವ ಮರವನ್ನೇರಿ ದೇವಾಲಯದ ಒಳಗೆ ನುಸುಳಿದ ದರೋಡೆಕೋರರು ಮೂವರನ್ನು ಹತ್ಯೆ ಮಾಡಿ, ಹುಂಡಿ ಹಣವನ್ನು ದೂಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಡ್ಯದ ಪೂರ್ವಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಗೈದು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ಆರಂಭಿಸಿದ್ದಾರೆ.

ಹತ್ಯೆ ಬಗ್ಗೆ ಸಂತಾಪ ಸೂಚಿಸಿರುವ ಸಿಎಂ ಯಡಿಯೂರಪ್ಪ, ಮಂಡ್ಯದ ಅರಕೇಶ್ವರ ದೇವಸ್ಥಾನದ ಅರ್ಚಕರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಿರುವ ವಿಷಯ ತಿಳಿದು ಅತ್ಯಂತ ನೋವಾಗಿದೆ ಎಂದು ಹೇಳಿದ್ದು, ಅವರ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.


ಇದನ್ನೂ ಓದಿ: IAS ಜಿಹಾದ್:’ UPSC ಸೇವೆಗಳಲ್ಲಿ ಮುಸ್ಲಿಮರ ಆಕ್ರಮಣ’ ಕಾರ್ಯಕ್ರಮ ಪ್ರಸಾರಕ್ಕೆ ಅವಕಾಶ ನೀಡಿದ ಬಿಜೆಪಿ ಸರ್ಕಾರ  

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights