ಕಾಂಗ್ರೆಸ್‌ ಉಸ್ತುವಾರಿಯಲ್ಲಿ ಬದಲಾವಣೆ; ರಾಜ್ಯಕ್ಕೆ ಸುರ್ಜೇವಾಲ್, AICCಗೆ ರಾಜ್ಯದಿಂದ ಮೂವರು!

ರಾಷ್ಟ್ರೀಯ ಕಾಂಗ್ರೆಸ್‌ನಲ್ಲಿನ ನಾಯಕತ್ವ ಬದಲಾವಣೆ ಬಗೆಗಿನ ಭಿನ್ನಾಭಿಪ್ರಾಯಗಳು ಇನ್ನೂ ಚರ್ಚೆಯಲ್ಲಿರುವಾಗಲೇ, ಕಾಂಗ್ರೆಸ್‌ನಲ್ಲಿ ಕೆಲವು ಬದಲಾಗವಣೆಗೂ ನಡೆಯುತ್ತಿವೆ. ಕಾಂಗ್ರೆಸ್‌ನ ರಾಷ್ಟ್ರೀಯ ಸಂಘಟನಾ ಸಮಿತಿಯನ್ನು ಪುನರ್‌ ರಚನೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿಗಳನ್ನು ಬದಲಿಸಲಾಗಿದೆ. ಕರ್ನಾಟಕ ಕಾಂಗ್ರೆಸ್‌ಗೆ ನೂತನ ಉಸ್ತುವಾರಿಯನ್ನಾಗಿ ರಣದೀಪ್‌ಸಿಂಗ್‌ ಸುರ್ಜೇವಾಲ್ ಅವರನ್ನು ನೇಮಿಸಲಾಗಿದೆ.

ಈ ಹಿಂದೆ ರಾಜ್ಯ ಕಾಂಗ್ರೆಸ್‌ನ ಉಸ್ತುವಾರಿ ಹೊತ್ತಿದ್ದ ಕೆಸಿ ವೇಣುಗೋಪಾಲ್‌ ಅವರ ವಿರುದ್ಧ, ಮೈತ್ರಿ ಸರ್ಕಾರ ರಚನೆ, ಲೋಕಸಭಾ ಸೀಟು ಹಂಚಿಕೆ ಸೇರಿದಂತೆ ಹಲವು ಸಂದರ್ಭಗಳಲ್ಲಿ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಉಸ್ತುವಾರಿಗಳನ್ನು ಬದಲಾಯಿಸಲಾಗಿದೆ.

ಅಲ್ಲದೆ, ರಾಜ್ಯ ಕಾಂಗ್ರೆಸ್‌ ನಾಯಕರಾದ ದಿನೇಶ್‌ ಗುಂಡೂರಾವ್, ಹೆಚ್‌ಕೆ ಪಾಟೀಲ್‌ ಮತ್ತು ಕೃಷ್ಣ ಭೈರೇಗೌಡರನ್ನು ಹೊಸದಾಗಿ ಎಐಸಿಸಿಯ ವಿವಿಧ ಸಮಿತಿಗಳಗೆ ಆಯ್ಕೆ ಮಾಡಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯರಾಗಿ ಮುಂದುವರಿಯಲಿದ್ದು, ಜೊತೆಗೆ ರಾಜ್ಯಸಭಾ ವಿರೋಧ ಪಕ್ಷದ ನಾಯಕರಾಗಿರುವ ಗುಲಾಂ ನಭೀ ಅವರ ಅಧಿಕಾರವಾಗಿ ಮುಗಿಯಲಿರುವುದರಿಂದಾಗಿ, ಅವರ ನಂತರ,  ರಾಜ್ಯಸಭಾ ವಿರೋಧ ಪಕ್ಷದ ನಾಯಕರನ್ನಾಗಿ ಖರ್ಗೆ ಅವರನ್ನು ಆಯ್ಕೆ ಮಾಡಲು ಕಾಂಗ್ರೆಸ್‌ ಯೋಜಿಸಿದೆ ಎಂದು ಹೇಳಲಾಗಿದೆ.

ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಮಾಜಿ ಸಚಿವ ಎಚ್‌.ಕೆ. ಪಾಟೀಲ್‌ ಅವರನ್ನು ಸಿಡಬ್ಲ್ಯುಸಿ ಕಾಯಂ ಆಹ್ವಾನಿತರನ್ನಾಗಿ ಆಯ್ಕೆ ಮಾಡಲಾಗಿದೆ. ಇವರ ಜೊತೆಗೆ  ಮಾಜಿ ಸಚಿವ ಕೃಷ್ಣ ಬೈರೇಗೌಡ ಎಐಸಿಸಿ ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಇದರ ಜೊತೆಗೆ, ದಿನೇಶ್‌ ಗುಂಡೂರಾವ್‌ ಅವರನ್ನು ತಮಿಳುನಾಡು, ಪುದುಚೇರಿ ಮತ್ತು ಗೋವಾ ಕಾಂಗ್ರೆಸ್‌ನ ಉಸ್ತುವಾಗಿ ನೀಡಲಾಗಿದೆ. ಹೆಚ್‌ಕೆ ಪಾಟೀಲ್‌ ಅವರಿಗೆ ಮಹಾರಾಷ್ಟ್ರ ಕಾಂಗ್ರೆಸ್‌ಗೆ ಉಸ್ತುವಾರಿ ನೀಡಲಾಗಿದೆ. (ಈ ಹಿಂದೆ ಖರ್ಗೆ ಮಹಾರಾಷ್ಟ್ರ ಉಸ್ತುವಾರಿಯಾಗಿದ್ದರು).

ಹೊಸ ಉಸ್ತುವಾರಿ ಜವಾಬ್ದಾರಿಯ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್.ಕೆ.ಪಾಟೀಲ್‌ ಅವರು, ಮಹಾರಾಷ್ಟ್ರದಲ್ಲಿ ಮುಂದಿನ ಚುನಾವಣೆ ವೇಳೆಗೆ ಪಕ್ಷವನ್ನು ಗಟ್ಟಿಗೊಳಿಸಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡುವುದಕ್ಕಾಗಿ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಬಂಡಾಯ ನಾಯಕರನ್ನು ಹಣಿಯುತ್ತಿದೆಯೇ ಕಾಂಗ್ರೆಸ್‌? ಯುಪಿ ಚುನಾವಣಾ ಸಮಿತಿಗಳಲ್ಲಿ ಪತ್ರ ಬರೆದವರಿಗಿಲ್ಲ ಸ್ಥಾನ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights