ಕದ್ದು ಮುಚ್ಚಿ ಕೊಲಂಬೊಗೆ ಹೋಗಿರಲಿಲ್ಲ: ಹೆಚ್‌ಡಿಕೆ

ಜೆಡಿಎಸ್ ಪಕ್ಷದ ಕೆಲವು ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶ್ರೀಲಂಕಾದ ಕೊಲಂಬೊಗೆ ಹೋಗಿದ್ದು ಸತ್ಯ. ಆದರೆ, ಕದ್ದು ಮುಚ್ಚಿ ಹೋಗಿರಲಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದೆವು. ಯಾರಿಗೂ ತಿಳಿಯದಂತೆ ಪ್ರವಾಸ ಬೆಳೆಸಿದ್ದೆವು ಎಂದು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ ಎಂದಿದ್ದಾರೆ.

2014 ರ ಜೂನ್ ತಿಂಗಳಲ್ಲಿ ಪಕ್ಷ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೇ, ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ.

ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೋ ಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗಲೂ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ.

ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಆಚಾರವಿಲ್ಲದ ನಾಲಿಗೆ ನಿನ್ನ
ನೀಚ ಬುದ್ಧಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದುಶಿಸುವುದಕ್ಕೆ
ಚಾಚಿ ಕೊಂಡಿರುವಂತ ನಾಲಿಗೆ
ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲು ಬೇಡ ನಾಲಿಗೆ ಎಂದು ಪುರಂದರ ದಾಸರ ವಾಣಿಗಳನ್ನು ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ಕಲಬುರ್ಗಿಯಲ್ಲಿ 6 ಕೋಟಿ ಮೌಲ್ಯದ ಗಾಂಜಾ ಪತ್ತೆ; ಬಂಧಿತ ಆರೋಪಿ ಬಿಜೆಪಿ ಕಾರ್ಯಕರ್ತ

Spread the love

Leave a Reply

Your email address will not be published. Required fields are marked *