ಮೋದಿ ಸರ್ಕಾರವನ್ನು ಪ್ರಶ್ನಿಸದೇ, ಸಾಲದ ಆಯ್ಕೆಯನ್ನು ಒಪ್ಪಿಕೊಂಡ BJP ಅಧಿಕಾರದಲ್ಲಿರುವ 13 ರಾಜ್ಯಗಳು

ಕೊರೊನಾ ಮತ್ತು ಲಾಕ್‌ಡೌನ್‌ನಿಂದಾಗಿ ದೇಶದ ವಹಿವಾಟು ಸ್ಥಗಿತಗೊಂಡಿದ್ದು, ದೇಶದ ಆರ್ಥಿಕತೆ, ಜಿಡಿಪಿ  ಹಳ್ಳಕ್ಕೆ ಕುಸಿದಿದೆ. ಅಲ್ಲದೆ, ದೇಶದಲ್ಲಿನ ಜಿಎಸ್‌ಟಿ ಸಂಗ್ರಹವು ಮಣ್ಣು ತಿಂದಿದ್ದು, ಇದರ ನಷ್ಟವನ್ನು ಕೇಂದ್ರವು ರಾಜ್ಯಗಳ ಮೇಲೆ ಹೇರಲು ಮುಂದಾಗಿದೆ. ಜಿಎಸ್‌ಟಿ ಪರಿಹಾರ ಕೊರತೆ ನೀಗಿಸಲು ರಾಜ್ಯ ಸರ್ಕಾರಗಳಿಗೆ ಸಾಲ ಪಡೆದುಕೊಳ್ಳುವ ಎರಡು ಆಯ್ಕೆಗಳನ್ನು ನೀಡಲಾಗಿದ್ದು, ಬಿಜೆಪಿ ಅಧಿಕಾರದಲ್ಲಿರುವ 13 ರಾಜ್ಯಗಳು ಸಾಲ ಪಡೆಯಲು ಒಪ್ಪಿಕೊಂಡಿವೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ರಾಜ್ಯಗಳು 2.35 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಆದಾಯದ ಕೊರತೆಯನ್ನು ಎದುರಿಸುತ್ತಿದ್ದು, ಕೇಂದ್ರವು ರಾಜಗಳಿಗೆ ಜಿಎಸ್‌ಟಿ ಪಾಲು ನೀಡುವುದಿಲ್ಲ ಎಂದು ಹೇಳಿದ್ದು, ಸಾಲಕ್ಕೆ ದೂಡಲು ಮುಂದಾಗಿದೆ.

ಒಟ್ಟು 3 ಲಕ್ಷ ಕೋಟಿ ರೂಗಳ ಕುಸಿತವನ್ನು ಕೇಂದ್ರ ಎದುರಿಸುತ್ತಿದೆ. ಕೇವಲ 65000 ಕೋಟಿ ಸೆಸ್ ಸಂಗ್ರಹವಾಗುವ ನಿರೀಕ್ಷೆಯಿದ್ದು ಉಳಿದ 2.35 ಲಕ್ಷ ಕೋಟಿ ಕೊರತೆ ಬೀಳುತ್ತದೆ. ಹಾಗಾಗಿ ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು ಮತ್ತು ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022ರ ನಂತರ ಕೇಂದ್ರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ಕೇಂದ್ರವು ರಾಜ್ಯಗಳ ಮುಂದಿಟ್ಟಿದೆ.

ಈ ಪೈಕಿ, ಆಂಧ್ರಪ್ರದೇಶ, ಬಿಹಾರ, ಗುಜರಾತ್, ಹರಿಯಾಣ, ಕರ್ನಾಟಕ, ಮಧ್ಯಪ್ರದೇಶ, ಮೇಘಾಲಯ, ಸಿಕ್ಕಿಂ, ತ್ರಿಪುರ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಒಡಿಶಾ ರಾಜ್ಯಗಳು ಕೇಂದ್ರ ಸರ್ಕಾರದ ಸಾಲ ಪಡೆಯುವಿಕೆಯ 1ನೇ ಆಯ್ಕೆಯ ಪ್ರಸ್ತಾವವನ್ನು ಒಪ್ಪೊಕೊಂಡಿವೆ. ಆದರೆ ಮಣಿಪುರ ಮಾತ್ರ ಆಯ್ಕೆ 2 ಅನ್ನು ಆರಿಸಿದೆ.

ಇನ್ನೂ ಆರು ರಾಜ್ಯಗಳಾದ, ಗೋವಾ, ಅಸ್ಸಾಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಹಿಮಾಚಲ ಪ್ರದೇಶ – ಒಂದು ಅಥವಾ ಎರಡು ದಿನಗಳಲ್ಲಿ ತಮ್ಮ ಆಯ್ಕೆಯನ್ನು ನೀಡಲಿವೆ ಎಂಬುದನ್ನು ಹಣಕಾಸು ಸಚಿವಾಲಯದ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

Parties give thumbs up to GST, but with riders | Business Standard News

ಆರ್‌ಬಿಐ ನಿಂದ ಸಾಲ ಪಡೆದರೆ ಅಸಲು ಬಡ್ಡಿ ಎರಡನ್ನು ಕೇಂದ್ರ ತೀರಿಸಲಿದೆ. ಒಂದು ವೇಳೆ ಹೊರಗಿನಿಂದ 2.35 ಲಕ್ಷ ಸಾಲ ಪಡೆದರೆ ಕೇಂದ್ರ ಅಸಲನ್ನು ಮಾತ್ರ ತೀರಿಸುವುದಾಗಿಯೂ, ರಾಜ್ಯಗಳು ಬಡ್ಡಿ ಭರಸಬೇಕೆಂದು ಕೇಂದ್ರ ಹೇಳಿದೆ.

ಕೆಲವು ರಾಜ್ಯಗಳು ತಮ್ಮ ಅಭಿಪ್ರಾಯಗಳನ್ನು ಜಿಎಸ್‌ಟಿ ಕೌನ್ಸಿಲ್ ಅಧ್ಯಕ್ಷರಿಗೆ ಸಲ್ಲಿಸಿದ್ದು, ಆಯ್ಕೆಗಳ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಆಗಸ್ಟ್ 27 ರಂದು ನಡೆದ ಸಭೆಯಲ್ಲಿ ಜಿಎಸ್‌ಟಿ ಕೌನ್ಸಿಲ್ ಈ ಎರಡು ಆಯ್ಕೆಗಳನ್ನು ನಿರ್ಧರಿಸಿತ್ತು.

ಆದರೆ, ಕೇಂದ್ರದ ಈ ಎರಡೂ ಆಯ್ಕೆಗಳನ್ನು ಬಿಜೆಪಿಯೇತರ ರಾಜ್ಯಗಳು ವಿರೋಧಿಸಿವೆ. ಕಾನೂನುಬದ್ಧವಾಗಿ ನ್ಯಾಯಯುತವಾಗಿ ನಮ್ಮ ಪಾಲಿನ ತೆರಿಗೆ ಹಣ ನೀಡಿ ಎಂದು ಪಟ್ಟು ಹಿಡಿದಿವೆ. ಕೇರಳವಂತು ಕೇಂದ್ರ ಹಣ ನೀಡದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದೆ.

ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಿಎಸ್‌‌ಟಿ ಪರಿಹಾರದ ಕೊರತೆಯನ್ನು ಪೂರೈಸಲು ಕೇಂದ್ರವು ಸಾಲ ಪಡೆಯಬೇಕು ಎಂದು ಸಲಹೆ ನೀಡಿದ್ದರು.

ಈ ಕುರಿತು ಪಿಣರಾಯಿ ವಿಜಯನ್, “ರಾಜ್ಯಗಳಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರ ಮೊತ್ತವನ್ನು ನೀಡಿ. ರಾಜ್ಯಗಳಿಗೆ ಎದುರಾಗಿರುವ ತೊಂದರೆಯನ್ನು ನೀಗಿಸಲು ಸಹಕಾರಿಯಾಗಬೇಕೆಂದು, ಮತ್ತು  ರಾಜ್ಯಗಳ ಪರಿಸ್ಥಿತಿಯನ್ನು ಪ್ರಧಾನಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಈ ಪತ್ರ ಬರೆದಿದ್ದೇನೆ” ಎಂದು ಟ್ವೀಟ್ ಮಾಡಿದ್ದರು.


ಇದನ್ನೂ ಓದಿ:  ಚುನಾವಣಾ ವೆಚ್ಚ ಶೇ. 10ರಷ್ಟು ಹೆಚ್ಚಿಸಲು ಚುನಾವಣಾ ಆಯೋಗ ನಿರ್ಧಾರ!

Spread the love

Leave a Reply

Your email address will not be published. Required fields are marked *