ದೆಹಲಿ ಪೊಲೀಸರು ಅಮಾಯರಿಗೆ ಅಪರಾಧಿ ಪಟ್ಟ ಕಟ್ಟುವ ಷಡ್ಯಂತ್ರ ರೂಪಿಸುತ್ತಿದ್ದಾರೆ: ಪ್ರಶಾಂತ್ ಭೂಷಣ್

ಕಳೆದ ಫೆಬ್ರವರಿಯಲ್ಲಿ ನಡೆದ ದೆಹಲಿ ಗಲಬೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರನ್ನು ಬಂಧಿಸಲಾಗಿದೆ. ಖಾಲಿದ್ ಅವರ ಬಂಧನವನ್ನು ವಿರೋಧಿಸಿ ಅವರನ್ನು ಬಿಡುಗಡೆ ಮಾಡುವಂತೆ ಇಂದು ದೆಹಲಿಯ ಸಿವಿಲ್ ಸೊಸೈಟಿ ಮುಖಂಡರು ಪತ್ರಿಕಾ ಗೋಷ್ಟಿ ನಡೆಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ನ್ಯಾಯವಾದಿ, ವಕೀಲ ಪ್ರಶಾಂತ್ ಭೂಷಣ್ ಅವರು, ಉಮರ್ ಖಾಲಿದ್‌ನನ್ನು ಅಪರಾಧಿ ಎಂದು ಪಟ್ಟಕಟ್ಟಲು ದೆಹಲಿ ಪೊಲೀಸರು ಹರ ಸಾಹಸ ಪಡುತ್ತಿದ್ದಾರೆ. ಖಾಲಿದ್‌ನನ್ನು ಇಸ್ಲಾಮಿಕ್ ಪ್ರತ್ಯೇಕತಾವಾದಿ ನಾಯಕನಂತೆ ಬಿಂಬಿಸುವ ಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ದೆಹಲಿ ಪೊಲೀಸರು ಅಮಾಯಕರಿಗೆ ಅಪರಾಧಿ ಪಟ್ಟ ಕಟ್ಟಿ, ಸಮಾಜದಲ್ಲಿಅವರನ್ನು ಕ್ರಿಮಿನಲ್‌ಗಳೆಂದು ಬಿಂಬಿಸುವ ಷಡ್ಯಂತ್ರ ರೂಪಿಸುತ್ತಿದ್ದಾರೆ. ಗಲಬೆಯಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧನವಾಗಿರುವ ಯಾರೊಬ್ಬರ ವಿರುದ್ಧವೂ ಸೂಕ್ತ ಸಾಕ್ಷ್ಯಾಧಾರವಿಲ್ಲ, ಆದರೂ ಬಂಧಿಸಲಾಗಿದೆ. ಈ ಬಗ್ಗೆ ರಾಷ್ಟ್ರಪತಿಗಳಿಗೂ ಪತ್ರ ಬರೆದಿದ್ದೇವೆ ಎಂದು ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಯೋಜನಾ ಆಯೋಗದ ಮಾಜಿ ಸದಸ್ಯೆ ಸಯೀದಾ ಹಮೀದ್, ಕಮ್ಯುನಿಸ್ಟ್‌ ನಾಯಕಿ ಕವಿತ್ ಕೃಷ್ಣನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: UAPA ಅಡಿಯಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಬಂಧನ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights