ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ್‌ ಗಸ್ತಿ ನಿಧನ!

ಕಳೆದ ಎರಡು ತಿಂಗಳ (ಜುಲೈ) ಹಿಂದೆಯಷ್ಟೇ ರಾಜ್ಯಸಭೆಗೆ ಆಯ್ಕೆಯಾಗಿದ್ದ ಬಿಜೆಪಿ ಸಂಸದ ಅಶೋಕ್ ಗಸ್ತಿ (55) ಕೊರೊನಾದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರು ಕಳೆದ 15 ದಿನಗಳಿಂದ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನಕ್ಕೆ ಆರೋಗ್ಯ  ಸಚಿವ ಬಿ. ಶ್ರೀರಾಮುಲು ಟ್ವೀಟ್ ಮಾಡಿದ್ದು, “ಅಶೋಕ್ ಗಸ್ತಿ ಅವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು ತೀವ್ರ ದುಃಖ ನೀಡಿದೆ. ಅವರು ಕಳೆದ 15 ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ.” ಎಂದು ಟ್ವೀಟ್ ಮಾಡಿದ್ದಾರೆ.

ಅಶೋಕ್ ಗಸ್ತಿ  ಯವರು ರಾಯಚೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಜೆಪಿ ಬೆಳಗಾವಿ ನಗರಾಧ್ಯಕ್ಷರಾಗಿದ್ದರು. ಅವರನ್ನು ಜುಲೈ ತಿಂಗಳಿನಲ್ಲಿ ರಾಜ್ಯಸಭೆಗೆ ಬಿಜೆಪಿಯಿಂದ ಆಯ್ಕೆ ಮಾಡಲಾಗಿತ್ತು.


ಇದನ್ನೂ ಓದಿ:  ರಾಜ್ಯಸಭಾ ಚುನಾವಣೆ: ರಾಜ್ಯ ಬಿಜೆಪಿಗೆ ಶಾಕ್‌ ಕೊಟ್ಟ ಬಿಜೆಪಿ ಹೈಕಮಾಂಡ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights