ಭಾರತದಲ್ಲಿ ಕೊರೊನಾ ಅಟ್ಟಹಾಸ : ಒಂದೇ ದಿನದಲ್ಲಿ 96,424 ಕೇಸ್!

ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 96,424 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 52 ಲಕ್ಷ ಮೀರಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಕೊರೊನಾವೈರಸ್ ಪ್ರಕರಣಗಳ ಪೈಕಿ 41,12,551 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಸಾವಿನ ಸಂಖ್ಯೆ 84,372 ಕ್ಕೆ ಏರಿದೆ.

ಕೇಂದ್ರ ಸರ್ಕಾರದ ಪ್ರಕಾರ, ಸೋಂಕಿನಿಂದಾಗಿ ಕೊರೊನಾವೈರಸ್ ಪ್ರಕರಣದ ಸಾವಿನ ಪ್ರಮಾಣ ಶೇಕಡಾ 1.62 ಕ್ಕೆ ಇಳಿದಿದೆ. ಲಸಿಕೆಯ ಸುಧಾರಿತ ಕ್ಲಿನಿಕಲ್ ಪ್ರಯೋಗಗಳು ಯಶಸ್ವಿಯಾದರೆ 2021 ರ ಮೊದಲ ತ್ರೈಮಾಸಿಕದ ಅಂತ್ಯದ ವೇಳೆಗೆ ಕೊರೊನಾವೈರಸ್ ಲಸಿಕೆ ಲಭ್ಯವಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಸಚಿವ ಅಶ್ವಿನಿ ಚೌಬೆ ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights