ಜಿಲ್ಲಾಡಳಿತದ ವಿರುದ್ಧ ಶಾಸಕಿ ಏಕಾಂಗಿ ಪ್ರತಿಭಟನೆ: ಕಾಮಗಾರಿ ಪೂರ್ಣಗೊಳಿಸಲು ಆಗ್ರಹ!

ಕೋಲಾರ ಜಿಲ್ಲೆಯ ಕೆಜಿಎಫ್​​ ನಗರದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿ ಆರಂಭಿಕ ಹಂತಕ್ಕೆ ಬಂದು ಸ್ಥಗಿತಗೊಂಡಿದೆ. ಹಾಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತದ ವಿರುದ್ಧ ಕಾಂಗ್ರೆಸ್​ ಶಾಸಕಿ ರೂಪಾ ಶಶಿಧರ್ ಅವರು ಏಕಾಂಗಿಯಾಗಿ​​ ಪ್ರತಿಭಟನೆ ನಡೆಸಿದ್ದಾರೆ.

ಇಂದು ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಫೋಟೋ ಹಿಡಿದು ಕೆಜಿಎಫ್​​ನ ಅಶೋಕ ನಗರ, ಎಂಜಿ ರಸ್ತೆ ಕಾಮಗಾರಿ ಶುರು ಮಾಡುವಂತೆ ಆಗ್ರಹಿಸಿ ಜಿಲ್ಲಾಡಳಿತದ ವಿರುದ್ಧ ಶಾಸಕಿ ಪ್ರತಿಭಟನೆ ಮಾಡಿದ್ದಾರೆ.

ಪ್ರತಿಭಟನೆ ಸಮಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಶಾಸಕ ರೂಪಾ ಶಶಿಧರ್, ಜಿಲ್ಲಾಡಳಿತವು ರಸ್ತೆ ಕಾಮಗಾರಿ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಸುಮಾರು ವರ್ಷಗಳಿಂದ ರಸ್ತೆ ಅಗಲೀಕರಣ ಪ್ರಕ್ರಿಯೆ ನಿಂತಲೇ ನಿಂತಿದೆ. ಜಿಲ್ಲಾಡಳಿತ ಈ ಕಾಮಗಾರಿಯನ್ನು ಶೀಘ್ರವೇ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದ ಕೃಷಿ ನೀತಿ ರೈತ ವಿರೋಧಿಯಾಗಿದೆ ಎಂದು ಸಚಿವ ಸ್ಥಾನಕ್ಕೆ ಕೇಂದ್ರ ಸಚಿವೆ ರಾಜೀನಾಮೆ!

ರಸ್ತೆ ಕಾಮಗಾರಿಯನ್ನು ಆರಂಭಿಸುವಂತೆ ಒಬ್ಬ ಶಾಸಕಿಯಾಗಿ ನಾನು ಮನವಿ ಮಾಡಿದರೂ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿಲ್ಲ. ಬಲಾಢ್ಯರು ಕಾಮಗಾರಿಗೆ ಅಡ್ಡಿಪಡಿಸುತ್ತಿದ್ದಾರೆ. ಆದರೆ, ಒಂದು ಸಣ್ಣ ರಸ್ತೆ ಕಾಮಕಾರಿಯನ್ನೂ ಮಾಡಿಸಲು ಶಾಸಕರಿಂದ ಆಗುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಿಕ್ಕಿರಿದ ರಸ್ತೆಯಿಂದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈಗಾಗಲೇ ಕಾಮಗಾರಿಗಾರಿ 2013ರಲ್ಲೇ ತೆರವು ಕಾರ್ಯನಡೆದಿದೆ. ಸುಮಾರು ಜನರು ಮನೆ ಕಳೆದುಕೊಂಡಿದ್ದಾರೆ. ಆದರೂ ಕಾಮಗಾರಿ ಆರಂಭವಾಗಿಲ್ಲ. ಈ ಬಗ್ಗೆ ಜಿಲ್ಲಾಡಳಿತ ಮತ್ತು ಲೋಕೋಪಯೋಗಿ ಇಲಾಖೆ ಸ್ಪಷ್ಟನೆ ನೀಡಬೇಕು. ಇಲ್ಲವಾದಲ್ಲಿ, ಅಧಿವೇಶನವನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತೇನೆ ಎಂದು ಶಾಸಕಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾಹದಿಂದ ತತ್ತರಿಸಿದ ರಾಜ್ಯದ ಜನರಿಗೆ ಬಿಜೆಪಿ ಸಂಸದರಿಂದ ದ್ರೋಹ – ಡಿಕೆಶಿ ಗರಂ

ಕೆಜಿಎಫ್​​ ನಗರದ ಸ್ಕೂಲ್ ಮೈನ್ಸ್​ನಿಂದ ಗಾಂಧಿ ಸರ್ಕಲ್​ವರೆಗೂ 1.8 ಕಿಲೋ ಮೀಟರ್​ ರಸ್ತೆ ಅಗಲೀಕರಣ ಮಾಡಲು 2013ರಲ್ಲೇ ನಿರ್ಧರಿಸಲಾಗಿತ್ತು. ಅದಕ್ಕಾಗಿ ಆಗಲೇ ರಸ್ತೆ ತೆರವು ಕಾರ್ಯಾಚರಣೆ ನಡೆದಿತ್ತು. ಅನುಮತಿ ಪಡೆಯದೇ ತೆರವು ಕಾರ್ಯಾಚರಣೆ ಮಾಡಲಾಗದು ಎಂದು ಪೊಲೀಸರು ಮಧ್ಯಪ್ರವೇಸಿ, ಕಾರ್ಯಾಚರಣೆಯನ್ನು ತಡೆದಿದ್ದರು. ಹೀಗಾಗಿ ರಸ್ತೆ ತೆರವು ಕಾರ್ಯಾಚರಣೆ ಸ್ಥಗಿತಗೊಂಡಿತ್ತು.

ಬಳಿಕ ರಸ್ತೆ ಅಗಲೀಕರಣ ಕಾಮಗಾರಿ ಆಗಿಲ್ಲ ಎಂದು 11 ಮಂದಿ ವ್ಯಾಪಾರಿಗಳು ಕೋರ್ಟ್​ಮೆಟ್ಟಿಲೇರಿದ್ದರು. ನ್ಯಾಯಲವೂ ಜಿಲ್ಲಾಡಳಿತ ಹಂತದಲ್ಲೇ ರಸ್ತೆ ಅಗಲೀಕರಣ ಕಾಮಗಾರಿ ಮುಗಿಯಲಿ ಎಂದು ಆದೇಶ ನೀಡಿತ್ತು. ಇದೀಗ ಜಿಲ್ಲಾಡಳಿತ ಕಚೇರಿ ನಿರ್ಲಕ್ಷ್ಯದಿಂದ ಇನ್ನೂ ರಸ್ತೆ ಅಗಲೀಕರಣ ಕಾಮಗಾರಿ ಮುಗಿದಿಲ್ಲ ಎಂಬುದು ಶಾಸಕಿ ರೂಪಾ ಶಶಿಧರ್​ ಆರೋಪ.


ಇದನ್ನೂ ಓದಿ: ಭ್ರಷ್ಟಾಚಾರಿ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತೊಗೆಯಿರಿ: ಶಂಕರ್ ಬಿದರಿ


ಇದನ್ನೂ ಓದಿ: ದೇಶಕ್ಕೆ 18 ಲಕ್ಷ ಕೋಟಿ ನಷ್ಟವಾಗಿದೆ; ಸರ್ಕಾರ ನಡೆಸಲಾಗದಿದ್ದರೆ ರಾಜೀನಾಮೆ ಕೊಡಿ: ಸಿದ್ದರಾಮಯ್ಯ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights