ಕೃಷಿ ಮಸೂದೆಯನ್ನು ವಿರೋಧಿಸುತ್ತಿರುವ ರೈತರನ್ನು ಭಯೋತ್ಪಾದಕರು ಎಂದ ಕಂಗನಾ ಕಣಾವತ್
ರಾಜ್ಯಸಭೆಯಲ್ಲಿ ಭಾನುವಾರ ಅಂಗೀಕರಿಸಲ್ಪಟ್ಟ ಕೃಷಿ -ಮಾರುಕಟ್ಟೆ ಮಸೂದೆಗಳ ವಿರುದ್ಧ ಪಂಜಾಬ್‌ನಾದ್ಯಂತ ಆಂದೋಲನ ನಡೆಸುತ್ತಿರುವವರನ್ನು ನೋಡಿ, ಅವರು ಸಿಎಎ ವಿರುದ್ಧ ಪ್ರತೀಭಟನೆ ನಡೆಸಿದ್ದ, ಗಲಬೆಗೆ ಕಾರಣರಾದ ಭಯೋತ್ಪಾದಕರು ಎಂದು ಕಂಗನಾ ರಣಾವತ್ ಟ್ವೀಟ್ ಮಾಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಟ್ವೀಟ್ ಅನ್ನು ಉಲ್ಲೇಖಿಸಿರುವ ಕಂಗಾನಾ, ಸಿಎಎ ಬಗ್ಗೆ ತಪ್ಪು ಮಾಹಿತಿ ಮತ್ತು ವದಂತಿಗಳನ್ನು ಹರಡಿದ ಜನರು ಈಗ ರೈತರ ಮಸೂದೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದ್ದಾರೆ ಮತ್ತು ರಾಷ್ಟ್ರದಲ್ಲಿ ಭಯೋತ್ಪಾದನೆಯನ್ನು ಉಂಟುಮಾಡುತ್ತಿದ್ದಾರೆ, ಅವರು ಭಯೋತ್ಪಾದಕರು ಎಂದು ಕಂಗನಾ ಟ್ವೀಟ್ ಮಾಡಿದ್ದಾರೆ.
प्रधानमंत्री जी कोई सो रहा हो उसे जगाया जा सकता है, जिसे ग़लतफ़हमी हो उसे समझाया जा सकता है मगर जो सोने की ऐक्टिंग करे, नासमझने की ऐक्टिंग करे उसे आपके समझाने से क्या फ़र्क़ पड़ेगा? ये वही आतंकी हैं CAA से एक भी इंसान की सिटिज़ेन्शिप नहीं गयी मगर इन्होंने ख़ून की नदियाँ बहा दी. https://t.co/ni4G6pMmc3
— Kangana Ranaut (@KanganaTeam) September 20, 2020
ಪಂಜಾಬ್ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೆದ್ದಿವೆ. ಪಂಜಾಬ್‌ನಲ್ಲಿ ಕೃಷಿ ಮಸೂದೆಯನ್ನು ವಿರೋಧಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜ್ಯಸಭೆಯ ನಿನ್ನೆ ಅಧಿವೇಶನದಲ್ಲಿ ಕೃಷಿ ಮಸೂದೆಯ ವಿರುದ್ಧ ವಿಪಕ್ಷಗಳು ಭಾರಿ ಪತ್ರಿಭಟನೆ ನಡೆಸಿವೆ. ಪ್ರತಿಭಟನೆ ನಡೆಸಿದ ವಿಪಕ್ಷಗಳ -08 ರಾಜ್ಯಸಭಾ ಸದಸ್ಯರನ್ನು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯನಾಯ್ಡು ಅಮಾನತುಗೊಳಿಸಿದ್ದಾರೆ.
ದೇಶಾದ್ಯಂತ ಕೃಷಿ ಮಸೂದೆಯ ವಿರುದ್ಧ ಆಕ್ರೊಶ ವ್ಯಕ್ತವಾಗುತ್ತಿರುವ ಹಾಗೂ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ ಪ್ರತಿಭಟನಾ ಕಾರರನ್ನು ಭಯೋತ್ಪಾದಕರು ಎಂದು ಕಂಗನಾ ಹೇಳಿದ್ದು, ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
ಇಂದು ರೈತರು, ನಾಳೆ ಸೈನಿಕರೂ ಭಯೋತ್ಪಾದಕರೇ?
ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ, ದೇಶಕ್ಕೆ ಅನ್ನ ನೀಡುವ ರೈತರನ್ನೇ ಭಯೋತ್ಪಾದಕರೆಂದು ಕರೆದಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುವವರೆಲ್ಲರನ್ನೂ ದೇಶದ್ರೋಹಿಗಳು, ಭಯೋತ್ಪಾದಕರು ಎಂದು ಬಿಂಬಿಸಿ ಹಣೆಪಟ್ಟಿ ಕಟ್ಟುವ ಮೂಲಕ ಪ್ರಜಾಪ್ರಭುತ್ವದ ದನಿಯನ್ನು ಮುಚ್ಚಿಸು ಹುನ್ನಾರ ನಡೆಯುತ್ತಿದೆ. ಇಂದು ರೈತರನ್ನೇ ಭಯೋತ್ಪಾದಕರು ಎಂದ ಮೇಲೆ, ನಾಳೆ ಜನಸಾಮಾನ್ಯರನ್ನೂ ಅಥವಾ ದೇಶ ಕಾಯುವ ಸೈನಿಕರನ್ನೂ ಭಯೋತ್ಪಾದಕರು ಎಂದು ಕರೆಯಲು ಇವರು ಹಿಂಜರಿಯುವುದಿಲ್ಲ ಎಂದು ಕೆವಿಎಸ್ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

