ಮೈಸೂರು ವಿವಿ ಕೆಸೆಟ್‌ ಪರೀಕ್ಷೆಗೆ ಪ್ರವೇಶ ಪತ್ರ ಪಡೆಯಲು ಅವಧಿ ವಿಸ್ತರಣೆ!

ಮೈಸೂರು ವಿಶ್ವ ವಿದ್ಯಾನಿಲಯದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯು ಸೆಪ್ಟಂಬರ್ 27ರ ಭಾನುವಾರ ನಡೆಯಲಿದೆ. ಅಭ್ಯರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆಯಲು ಸಮಯವನ್ನು ವಿಸ್ತರಿಸಿದ್ದು, ಇಂದು (ಬುಧವಾರ) ಮಧ್ಯ ರಾತ್ರಿ 12 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷೆಗೆ ಇನ್ನು ನಾಲ್ಕು ದಿನಗಳು ಮಾತ್ರ ಬಾಕಿ ಉಳಿದಿವೆ. ಆದರೆ, ವೈಸೂರು ವಿವಿಯ ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರಗಳನ್ನ ಡೌನ್ ಲೋಡ್ ಮಾಡಿಕೊಳ್ಳವ ಅವಕಾಶವನ್ನು ಈ ಮಧ್ಯೆ ಬಂದ್‌ ಮಾಡಿತ್ತು. ಹಾಗಾಗಿ ಹಲವು ಅಭ್ಯರ್ಥಿಗಳು ಪ್ರವೇಶ ಪತ್ರ ಪಡೆಯಲು ಸಾಧ್ಯವಾಗಿರಲಿಲ್ಲ. ಅದ್ದರಿಂದ ಪ್ರವೇಶ ಪತ್ರ ಪಡೆಯಲು ಅವಕಾಶ ಕಲ್ಪಿಸಿಕೊಡುವಂತೆ ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದರು. ಅಭ್ಯರ್ಥಿಗಳ ಮನವಿಯ ಮೇರೆಗೆ ಕಾಲಾವಕಾಶವನ್ನು ಇಂದು ಮಧ್ಯರಾತ್ರಿಯವರೆಗೆ ವಿಸ್ತರಿಸಿದೆ.

mysore –university-K-Set- Examination- Extension - admission card.

ಅಭ್ಯರ್ಥಿಗಳ ಅನುಕೂಲಕ್ಕಾಗಿ  ವೆಬ್ ಸೈಟ್ ನಲ್ಲಿ (http://kset.uni-mysore.ac.in/)  ದಿನಾಂಕ 23 -9-2020 ರಂದು ಮಧ್ಯರಾತ್ರಿ 12 ಗಂಟೆವರೆಗೆ ಪ್ರವೇಶ ಪತ್ರಗಳನ್ನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.  ಈಗಾಗಲೇ ಪ್ರವೇಶ ಪತ್ರಗಳನ್ನು ಪಡೆದಿರುವ ಅಭ್ಯರ್ಥಿಗಳು ಮತ್ತೆ ಪ್ರವೇಶ ಪತ್ರಗಳನ್ನು ಪಡೆಯುವ ಅವಶ್ಯಕತೆ ಇಲ್ಲ ಎಂದು  ಸಂಯೋಜನಾಧಿಕಾರಿ ಪ್ರೊ. ಹೆಚ್. ರಾಜಶೇಖರ್ ತಿಳಿಸಿದ್ದಾರೆ.


ಇದನ್ನೂ ಓದಿ: NEET exam: ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ನ್ಯಾಯಧೀಶರ ಒತ್ತಾಯ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights