ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ

ಬೆಳಗಾವಿಯ ಸಂಸದ, ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ (65) ಕೊರೊನಾದಿಂದಾಗಿ ದೆಹಲಿಯ ಏಮ್ಸ್‌ನಲ್ಲಿ ಮೃತಪಟ್ಟಿದ್ದಾರೆ.

ಸೆಪ್ಟೆಂಬರ್‌ 11 ರಂದು ಅವರು ತಾನು ಕೊರೊನಾ ಪಾಸಿಟಿವ್ ಆಗಿದ್ದೇನೆ ಎಂದು ಹೇಳಿದ್ದ ಅವರು, ತನ್ನ ಆರೋಗ್ಯ ಸ್ಥಿರವಾಗಿದೆ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ತನ್ನ ಸಂಪರ್ಕದಲ್ಲಿ ಬಂದಿದ್ದವರು ಸಂಪರ್ಕತಡೆ ಮಾಡುವಂತೆ ಕೇಳಿಕೊಂಡಿದ್ದರು. ಚಿಕಿತ್ಸೆಗಾಗಿ ದೆಹಲಿಯ ಏಮ್ಸ್‌‌ನಲ್ಲಿ ದಾಖಲಾಗಿದ್ದರು.

ಬಿಜೆಪಿ ಸಂಸದರಾಗಿರುವ ಅವರು 1996 ರಲ್ಲಿ ಪಕ್ಷದ ಬೆಳಗಾವಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ,  2001 ರಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕಗೊಂಡಿದ್ದರು.

2004 ರಲ್ಲಿ ಮೊದಲ ಬಾರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಚುನಾಯಿತಗೊಂಡರು. 2019 ರಲ್ಲಿ4 ನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದ ಇವರು ರೈಲ್ವೇ ಖಾತೆಯ ರಾಜ್ಯ ಸಚಿವರಾಗಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights