ಕೊರೊನಾದಿಂದಾಗಿ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ನಿಧನ..!

ಕೊರೊನಾ ಸೋಂಕಿನಿಂದಾಗಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ನಾರಾಯಣರಾವ್ ಅವರಿಗೆ 67 ವರ್ಷ ವಯಸ್ಸಾಗಿತ್ತು. ಆಗಸ್ಟ್ 31ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಹಳೆ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ 1/9/2020ರಂದು ಬಿ. ನಾರಾಯಣರಾವ್ ದಾಖಲಾಗಿದ್ದರು. ಕೋವಿಡ್ ಸೋಂಕಿತರಾಗಿದ್ದ 65 ವರ್ಷದ ಅವರು ಇಂದು 3.55ಕ್ಕೆ ನಿಧನ ಹೊಂದಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರಿಗೆ ವೆಂಟಿಲೇಟರ್‌ ಆಳವಡಿಕೆ ಮಾಡಲಾಗಿತ್ತು ಎಂದು ಮಣಿಪಾಲ್ ಆಸ್ಪತ್ರೆಯ ನಿರ್ದೇಶಕ ಡಾ. ಮನೀಶ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾರಾಯಣರಾವ್ ಅವರಿಗೆ ಆಗಸ್ಟ್ 31ರಂದು ಸೋಂಕು ದೃಢಪಟ್ಟಾಗ ಆಪ್ತರ ಸಲಹೆಯ ಮೇರೆಗೆ ಸೆಪ್ಟೆಂಬರ್ 1ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಮರುದಿನ ಚೇತರಿಸಿಕೊಂಡಿದ್ದರು. ನಂತರ ರಾಜಕೀಯ ಮುಖಂಡರು ಹಾಗೂ ಗೆಳೆಯರಿಗೆ ಮೊಬೈಲ್‌ ಕರೆ ಮಾಡಿ ‘ನಾನು ಕ್ಷೇಮವಾಗಿದ್ದೇನೆ. ನನ್ನ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿದ ನಿಮಗೆಲ್ಲರಿಗೂ ವಂದನೆಗಳು’ ಎಂದು ಹೇಳಿದ್ದರು. ನಂತರ  ಮತ್ತೆ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು.

ನಂತರದಲ್ಲಿ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ತೊಂದರೆ ಅನುಭವಿಸಿದ್ದರು. ಕಾಮಾಲೆ, ಅಧಿಕ ರಕ್ತದೊತ್ತಡದಿಂದ ಇನ್ನಷ್ಟು ಪರಿಸ್ಥಿತಿ ಬಿಗಡಾಯಿಸಿದ್ದರಿಂದ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ನಾರಾಯಣರಾವ್ ಅವರು, ಮೈತ್ರಿ ಸರ್ಕಾರದ ವೇಳೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights