ಕೊರೊನಾ ಹೆಸರಿನಲ್ಲಿ ಖಾಸಗೀ ಆಸ್ಪತ್ರೆಗಳಿಂದ ಲೂಟಿ: ಸರ್ಕಾರದ ವಿರುದ್ಧ ಯತ್ನಾಳ್ ಗರಂ!

ಕೊರೊನಾ ವೈರಸ್ ಎಗ್ಗಿಲ್ಲದೇ ಜನರ ದೇಹವನ್ನು ಹೊಕ್ಕುತ್ತಿದೆ. ಇದನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಡಳಿತ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ. ಖಾಸಗಿ ಆಸ್ಪತ್ರೆಗಳು ಕೊರೊನಾ ಚಿಕಿತ್ಸೆ ನೆಪದಲ್ಲಿ ಖಾಸಗೀ ಆಸ್ಪತ್ರೆಗಳು ಜನರ ರಕ್ತ ಹೀರುತ್ತಿವೆ ಎಂದು ದೂರಿದ್ದಾರೆ. ಆರೋಗ್ಯ ಇಲಾಖೆ ಏನು ಮಾಡುತ್ತಿದೆ..? ಪ್ರಶ್ನಿಸಿದ ಯತ್ನಾಳ್ ಸರ್ಕಾರದ ವಿರುದ್ಧ ಕಿಡಿಕಾರಿದ್ರು.

ವಿಧಾನಸಭೆಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಸಂತಾಪ ಸೂಚಿದ ಬಳಿಕ ಮಾತನಾಡಿದ ಅವರು ಖಾಸಗೀ ಆಸ್ಪತ್ರೆಗಳು ಕೊರೊನಾ ಹೆಸರೇಳಿಕೊಂಡು ಹಣ ಕೊಳ್ಳೆ ಹೊಡೆಯುತ್ತಿವೆ ಎಂದು ಆರೋಪ ಮಾಡಿದರು. ಮಾತ್ರವಲ್ಲದೇ ತಮ್ಮ ಅನಭವವನ್ನು ಎಳೆ, ಎಳೆಯಾಗಿ ಕೇಲವೇ ನಿಮಿಷದಲ್ಲಿ ಸದನ ಮುಂದೆ ಬಿಚ್ಚಿಟ್ಟರು. ನನಗೆ ಹೀಗಾದರೆ ಜನ ಸಾಮಾನ್ಯರ ಪಾಡೆನು? ಸರ್ಕಾರ, ಆರೋಗ್ಯ ಇಲಾಖೆ ಏನು ಮಾಡುತ್ತಿದೆ ಎಂದರು.

ಬಸವನಗೌಡ ಪಾಟೀಲ್ ಯತ್ನಾಳ್, ಸುರೇಶ್ ಅಂಗಡಿ ನಿಧನದಿಂದ ಆಘಾತಗೊಂಡಿದ್ದೇನೆ. ಏಮ್ಸ್ ನಂತಹ ದೊಡ್ಡ ಸಂಸ್ಥೆಯಲ್ಲಿಯೇ ಅವರ ಜೀವ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದರೆ ನಾವು ಕೋವಿಡ್ ಬಗ್ಗೆ ಗಂಭೀರವಾಗಿ ಚಿಂತಿಸಬೇಕಾಗಿದೆ. ವಾರಕ್ಕೆ ಎರಡು ಬಾರಿ ಲಾಕ್ ಡೌನ್ ಮಾಡಬೇಕಾದ ಪರಿಸ್ಥಿತಿ ಬಂದಿದೆ ಎಂದರು.

ತಮಗೆ ಕೊರೊನಾ ಬಂದಾಗ ಖಾಸಗಿ ಆಸ್ಪತ್ರೆಯೊಂದು 3.80 ಲಕ್ಷ ಮೂರು ದಿನಕ್ಕೆ ಬಿಲ್ ಮಾಡಿದೆ. ಶಾಸಕರಾದ ನಮಗೇ ಇಷ್ಟು ಬಿಲ್ ಮಾಡಿದ್ದರೆ ಜನಸಾಮಾನ್ಯರ ಪಾಡೇನು? ಬೇಕಾಬಿಟ್ಟಿಯಾಗಿ ಖಾಸಗಿ ಆಸ್ಪತ್ರೆಗಳು ಹಣ ವಸೂಲಿ ಮಾಡುತ್ತಿವೆ. ಸರ್ಕಾರ ಏನು ಮಾಡುತ್ತಿದೆ? ಇಂತಹ ಆಸ್ಪತ್ರೆಗಳ ಮೇಲೆ ಸರ್ಕಾರಕ್ಕೆ ಯಾವ ನಿಯಂತ್ರಣವಿದೆ ? ಎಂದು ಪ್ರಶ್ನಿಸಿದರು.

Spread the love

Leave a Reply

Your email address will not be published. Required fields are marked *