ಭಾರತದಲ್ಲಿ 59 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ : ಹೊಸದಾಗಿ 85,362 ಕೇಸ್!

ಕಳೆದ 24 ಗಂಟೆಗಳಲ್ಲಿ ಭಾರತದಾದ್ಯಂತ 85,000 ಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಆ ಮೂಲಕ ದೇಶದ ಒಟ್ಟು ಕೊರೊನಾವೈರಸ್ ಪ್ರಕರಣಗಳು 59 ಲಕ್ಷಗಳನ್ನು ದಾಟಿದೆ. ಕಳೆದ 24 ಗಂಟೆಗಳಲ್ಲಿ 1,000 ಕ್ಕೂ ಹೆಚ್ಚು ಸಾವುಗಳು ದಾಖಲಾಗಿವೆ. ಸಾಂಕ್ರಾಮಿಕ ರೋಗದಿಂದ ಈವರೆಗೆ 93,000 ಸೋಂಕಿತರು ಬಲಿಯಾಗಿದ್ದಾರೆ ಎಂದು ಸರ್ಕಾರದ ಅಂಕಿ-ಅಂಶಗಳು ವರದಿಯಿಂದ ತಿಳಿದು ಬಂದಿದೆ.

ಕಳೆದ 24 ಗಂಟೆಗಳಲ್ಲಿ 93,000 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ ವೈರಸ್‌ನಿಂದ ಹೋರಾಡಿ ಒಟ್ಟು 48 ಲಕ್ಷ ಜನ ಚೇತರಿಸಿಕೊಂಡಿದ್ದಾರೆ.

ಇನ್ನೂ ಕಳೆದ 24 ಗಂಟೆಗಳಲ್ಲಿ ಸುಮಾರು 13.4 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಕೋವಿಡ್ ಸಾಂಕ್ರಾಮಿಕ ರೋಗದಿಂದ ಭಾರತ ಎರಡನೇ ಅತಿ ಹೆಚ್ಚು ಪೀಡಿತ ದೇಶವಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights