ಬಿಹಾರದಲ್ಲಿ ಅಧಿಕಾರಕ್ಕೆ ಬರುತ್ತಾ ಬಿಜೆಪಿ ಮೈತ್ರಿಕೂಟ: ಸಿವೋಟರ್ ಸಮೀಕ್ಷೆ ಹೇಳಿದ್ದೇನು?

ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು (ಸಂಯಕ್ತ ಜನತಾದಳ) ಪಕ್ಷಗಳ ಮೈತ್ರಿಕೂಟವು ಮತ್ತೊಮ್ಮೆ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಸಿವೋಟರ್ ಸಮೀಕ್ಷೆ ಹೇಳಿದೆ.

ಬಿಹಾರದಲ್ಲಿ ಅಕ್ಟೋಬರ್ 28, ನವೆಂಬರ್ 3 ಮತ್ತು ನವೆಂಬರ್ 7 ರಂದು ಮತದಾನ ನಡೆಯಲಿದ್ದು, ನವೆಂಬರ್ 10ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಪ್ರಕಟಿಸಿದ ನಂತರ ಸಮೀಕ್ಷೆ ನಡೆಸಲಾಗಿದೆ.

ರಾಜ್ಯದಲ್ಲಿ ನಿತೀಶ್‌ ಕುಮಾರ್‌ ನೇತೃತ್ವದ ಎನ್‌ಡಿ ಸರ್ಕಾರದ ವಿರುದ್ಧ ಜನರು ಕಿಡಿಕಾರಿದ್ದಾರೆ. ಆದರೆ, ನಿತೀಶ್‌ ಅವರೇ ಮತ್ತೊಮ್ಮೆ ಮುಖ್ಯಮಂತ್ರಿ ಆಗಬಹುದು ಎಂದು ಸಮೀಕ್ಷೆಗೆ ಒಳಪಟ್ಟವರಲ್ಲಿ 31% ಜನರು ಹೇಳಿದ್ದಾರೆ ಎಂದು ಸಮೀಕ್ಷಾ ವರದಿ ಹೇಳಿದೆ.

ಬಿಹಾರ ವಿಧಾನಸಭೆಯಲ್ಲಿ 243 ಸದಸ್ಯ ಸ್ಥಾನಗಳಿದ್ದು, ಅವುಗಳಲ್ಲಿ ಬಿಜೆಪಿ, ಜೆಡಿಯು ಪಕ್ಷಗಳ ಎನ್‌ಡಿಎ ಮೈತ್ರಿಕೂಟ 141 ರಿಂದ 161 ಸ್ಥಾನಗಳಲ್ಲಿ ಗೆಲ್ಲಲಿದೆ. ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಕೂಟ 64-84 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಸಮೀಕ್ಷೆಯಲ್ಲಿ ತಿಳಿದುಬಂದಿದೆ.

ಎನ್‌ಡಿಎ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ ಸಿಗುವ ಸಾಧ್ಯತೆ ಇದ್ದು, ಉಳಿದ ಪ್ರದೇಶಿಕ ಪಕ್ಷಗಳು 13 ರಿಂದ 23 ಸ್ಥಾನಗಳನ್ನು ಗೆಲ್ಲಬಹುದು ಎಂದು ಅಂದಾಜಿಸಲಾಗಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿ ಕೋಟಾದಿಂದ ಲೋಕ ಜನಶಕ್ತಿ ಪಕ್ಷಕ್ಕೆ ಸ್ಥಾನ..!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights