ತುಮಕೂರಿನಲ್ಲಿ ನಟಿ ಕಂಗನಾ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲು!

ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ತುಮಕೂರಿನ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿದೆ.

ಹೈಕೋರ್ಟ್ ವಕೀಲ ರಮೇಶ್ ನಾಯಕ್ ಎನ್ನುವವರು ತುಮಕೂರಿನಲ್ಲಿ ಖಾಸಗಿ ದೂರು ದಾಖಲು ಮಾಡಿದ್ದು, ರೈತರನ್ನು ಭಯೋತ್ಪಾದಕರು ಎಂದು ಕಂಗನಾ ಟ್ವಿಟರ್‌ನಲ್ಲಿ ಅವಮಾನ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ದ ಕ್ರಿಮಿನಲ್‌ ದೂರು ದಾಖಲಿಸಿರುವುದಾಗಿ ಹೇಳಿದ್ದಾರೆ.

ಕೃಷಿ -ಮಾರುಕಟ್ಟೆ ಮಸೂದೆಗಳ ವಿರುದ್ಧ ಪಂಜಾಬ್‌ನಾದ್ಯಂತ ಆಂದೋಲನ ನಡೆಸುತ್ತಿರುವವರನ್ನು ನೋಡಿ, ಅವರು ಸಿಎಎ ವಿರುದ್ಧ ಪ್ರತೀಭಟನೆ ನಡೆಸಿದ್ದ, ಗಲಬೆಗೆ ಕಾರಣರಾದ ಭಯೋತ್ಪಾದಕರು ಎಂದು ಕಂಗನಾ ರಣಾವತ್ ಟ್ವೀಟ್‌ ಮಾಡಿದ್ದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಟ್ವೀಟ್ ಅನ್ನು ಉಲ್ಲೇಖಿಸಿರುವ ಕಂಗಾನಾ, ಸಿಎಎ ಬಗ್ಗೆ ತಪ್ಪು ಮಾಹಿತಿ ಮತ್ತು ವದಂತಿಗಳನ್ನು ಹರಡಿದ ಜನರು ಈಗ ರೈತರ ಮಸೂದೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದ್ದಾರೆ ಮತ್ತು ರಾಷ್ಟ್ರದಲ್ಲಿ ಭಯೋತ್ಪಾದನೆಯನ್ನು ಉಂಟುಮಾಡುತ್ತಿದ್ದಾರೆ, ಅವರು ಭಯೋತ್ಪಾದಕರು ಎಂದು ಕಂಗನಾ ಟ್ವೀಟ್‌ ಮಾಡಿದ್ದಾರೆ.


ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸುತ್ತಿರುವ ರೈತರನ್ನು ಭಯೋತ್ಪಾದಕರು ಎಂದ ಕಂಗನಾ ಕಣಾವತ್

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights