ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರ ಸಿಟಿ ರವಿ? ಕಾರಣವೇನು ಗೊತ್ತೇ?

ಬಿಜೆಪಿ ರಾಷ್ಟ್ರೀಯ ನಾಯಕತ್ವದಲ್ಲಿ ಕರ್ನಾಟಕದಿಂದ ಇಬ್ಬರಿಗೆ ಹೊಸದಾಗಿ ಸ್ಥಾನ ದೊರೆದಿವೆ. ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ಆಯ್ಕೆ ಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಸಿಟಿ ರವಿ ಅವರನ್ನು ನೇಮಕ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವ ಸಿಟಿ ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಯೇ ಎಂಬ ಪ್ರಶ್ನೆ ರಾಜಕೀಯ ಪಡಸಾಲೆಯಲ್ಲಿ ಕುತೂಹಲ ಕರೆಳಿಸಿದೆ.

ಬಿಜೆಪಿ ಪಕ್ಷದ ನಿಯಮಗಳ ಅನುಸಾರ ಬಿಜೆಪಿಯಲ್ಲಿ ಒಬ್ಬರಿಗೆ ಒಂದೇ ಸ್ಥಾನ ಎಂಬ ಬಿಲುವಿದೆ. ಹಾಗಾಗಿ ಬಿಜೆಪಿಯ ರಾಷ್ಟ್ರೀಯ ನಾಯಕತ್ವದಲ್ಲ ಸ್ಥಾನ ಪಡೆದುಕೊಂಡಿರುವ ಸಿಟಿ ರವಿ ಅವರು ರಾಜೀನಾಮೆ ಕೊಡುವುದು ಅನಿವಾರ್ಯ ಎಂದು ಹೇಳಲಾಗುತ್ತಿದೆ.

ಬಿಜೆಪಿ ನಿಯಮಗಳು ಮುಂದುವರೆದಿದ್ದೇ ಆದಲ್ಲಿ ಸಿಟಿ ರವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಅಥವಾ, ಸಚಿವ ಸ್ಥಾನ ಉಳಿಸಿಕೊಳ್ಳುವುದಕ್ಕಾಗಿ ಬಿಜೆಪಿ ನೀಡಿರುವ ನಾಯಕತ್ವವನ್ನು ತಿರಸ್ಕರಿಸಬೇಕಾಗುತ್ತದೆ. ಸಿಟಿ ರವಿ ಅವರು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕಾದುನೋಡಬೇಕಿದೆ.

ಒಂದು ವೇಳೆ ಸಿಟಿ ರವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದೆ. ಸಚಿವ ಸಂಪುಟದಲ್ಲಿ ಮತ್ತೊಂದು ಸ್ಥಾನ ಖಾಲಿಯಾಗಲಿದೆ. ಇದು ಸಂಪುಟ ವಿಸ್ತರಣೆಗಾಗಿ ಕಸರತ್ತು ನಡೆಸುತ್ತಿರುವ ಸಿಎಂ ಯಡಿಯೂರಪ್ಪನವರಿಗೆ ನೆರವಾಗಲಿದೆ. ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕಾಗಿ ಭುಗಿಲೆದ್ದಿರುವ ಭಿನ್ನಮತದ ಶಮನಕ್ಕೂ ಉಪಯೋಗವಾಗಲಿದೆ.


ಇದನ್ನೂ ಓದಿ: BJP ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿಸೂರ್ಯ; ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಿಟಿ ರವಿ ನೇಮಕ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights