ಕನ್ನಡ ಹಿರಿಯ ಸಾಹಿತಿ ಡಾ. ಜಿ ಎಸ್ ಅಮೂರ ವಿಧಿವಶ : ರಾಜಕೀಯ ಗಣ್ಯರಿಂದ ಸಂತಾಪ!

ಕನ್ನಡ ಹಿರಿಯ ಸಾಹಿತಿ, ವಿಮರ್ಶಕ ಡಾಕ್ಟರ್ ಜಿ.ಎಸ್.ಆಮೂರ ಅವರು ಸೋಮವಾರ ನಿಧನರಾಗಿದ್ದಾರೆ.

96 ವರ್ಷ ವಯಸ್ಸಿನ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಬೆಳಗಿನ ಜಾವ ಬೆಂಗಳೂರಿನಲ್ಲಿ ಕಾಲವಾಗಿದ್ದಾರೆ. ಜಿ.ಎಸ್. ಆಮೂರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಸೇರಿ, ಅನೇಕ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಮೂರು ವಾರಗಳ ಹಿಂದೆಯಷ್ಟೇ ನೃಪತುಂಗ ಪ್ರಶಸ್ತಿ ಲಭಿಸಿದೆ.

ಕನ್ನಡ ಹಿರಿಯ ಸಾಹಿತಿ ಡಾಕ್ಟರ್ ಜಿ.ಎಸ್.ಆಮೂರ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

1925ರ ಮೇ 8 ರಂದು ಧಾರವಾಡ ಜಿಲ್ಲೆಯ ಬೊಮ್ಮನಹಳ್ಳಿಯಲ್ಲಿ ಜನಿಸಿದ ಇವರು ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಕನ್ನಡ, ಇಂಗ್ಲಿಷ್, ಸಂಸ್ಕೃತ, ಮರಾಠಿ ಭಾಷೆ ಸಾಹಿತ್ಯ ಬಲ್ಲವರಾಗಿದ್ದರು. ಕನ್ನಡ ಸಾಹಿತ್ಯ ವಿಮರ್ಶೆ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಜನಮನ್ನಣೆ ಗಳಿಸಿದ್ದರು. ಜಿ.ಎಸ್. ಆಮೂರ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ, ಬೇಂದ್ರೆ ಪ್ರಶಸ್ತಿ, ರಾಜ್ಯೋತ್ಸವ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿವೆ.

ವಿಮರ್ಶಕ ಅಮೂರರವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಕಸಾಪ ಅಧ್ಯಕ್ಷ ಮನು ಬಳಿಗಾರ್ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

 

ಸರಣಿ ಟ್ವೀಟ್‌ಗಳನ್ನು ಮಾಡಿರುವ ಮುಖ್ಯಮಂತ್ರಿಗಳು, ಇತ್ತೀಚೆಗಷ್ಟೆ ಅವರಿಗೆ ನೃಪತುಂಗ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಪ್ರಶಸ್ತಿಯನ್ನು ಸ್ವೀಕರಿಸುವ ಮುನ್ನವೇ ಅವರು ಇಹಲೋಕ ತ್ಯಜಿಸಿರುವುದು ದು:ಖವನ್ನುಂಟು ಮಾಡಿದೆ. ಅವರ ನಿಧನದಿಂದ ಕನ್ನಡ ಸಾಹಿತ್ಯಲೋಕದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಅಭಿಮಾನಿಗಳಿಗೆ ಮತ್ತು ಶಿಷ್ಯವೃಂದಕ್ಕೆ ಭಗವಂತ ನೋವು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

 

ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಸಂತಾಪ ಸೂಚಿಸಿದ್ದು, ಹಿರಿಯ ವಿಮರ್ಶಕ ಡಾ.ಜಿ.ಎಸ್.ಅಮೂರ ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರ ನಿಜಕ್ಕೂ ಬಡವಾಗಿದೆ. ಎಲೆಮರೆ ಕಾಯಿಯಂತೆ ಸದ್ದುಗದ್ದಲ ಇಲ್ಲದೆ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದ ಡಾ.ಅಮೂರ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ಅವರ ಅಗಲಿಕೆಯಿಂದ ನೊಂದಿರುವ ಬಂಧು ಮಿತ್ರರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ.

1925ರ ಮೇ 8 ರಂದು ಧಾರವಾಡ ಜಿಲ್ಲೆಯ ಬೊಮ್ಮನಹಳ್ಳಿಯಲ್ಲಿ ಜನಿಸಿದ ಇವರು ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಕನ್ನಡ, ಇಂಗ್ಲಿಷ್, ಸಂಸ್ಕೃತ, ಮರಾಠಿ ಭಾಷೆ ಸಾಹಿತ್ಯ ಬಲ್ಲವರಾಗಿದ್ದರು. ಕನ್ನಡ ಸಾಹಿತ್ಯ ವಿಮರ್ಶೆ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಜನಮನ್ನಣೆ ಗಳಿಸಿದ್ದರು. ಜಿ.ಎಸ್. ಆಮೂರ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ, ಬೇಂದ್ರೆ ಪ್ರಶಸ್ತಿ, ರಾಜ್ಯೋತ್ಸವ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿವೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights